ಗ್ರಾಮ ಪಂಚಾಯಿತಿ ಚುನಾವಣೆ: 2ನೇ ಹಂತದ ಮತದಾನ ಆರಂಭ
ಗ್ರಾಮ ಪಂಚಾಯತಿ ಚುನಾವಣೆಯ ಎರಡನೇ ಹಂತದ ಮತದಾನ ಮಂಗಳವಾರ ಬೆಳಗ್ಗೆ 7ರಿಂದ ಆರಂಭವಾಗಿದ್ದು, ಸಂಜೆ 5 ಗಂಟೆಯ ವರೆಗೆ ಮತದಾನ...

ಬೆಂಗಳೂರು: ಗ್ರಾಮ ಪಂಚಾಯತಿ ಚುನಾವಣೆಯ ಎರಡನೇ ಹಂತದ ಮತದಾನ ಮಂಗಳವಾರ ಬೆಳಗ್ಗೆ 7ರಿಂದ ಆರಂಭವಾಗಿದ್ದು, ಸಂಜೆ 5 ಗಂಟೆಯ ವರೆಗೆ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ. ಮೇ 29ರಂದು ಮೊದಲ ಹಂತದ ಮತದಾನ ನಡೆದಿದ್ದು ಶೇ 80ರಷ್ಟು ಮತ ಚಲಾವಣೆಯಾಗಿತ್ತು.
15 ಜಿಲ್ಲೆಗಳಲ್ಲಿ ಮತದಾನ ಆರಂಭವಾಗಿದ್ದು, ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನಲ್ಲಿರುವ ತ್ಯಾಗದಳ ಗ್ರಾಮದಲ್ಲಿ ಚುನಾವಣೆ ಬಹಿಷ್ಕರಿಸಲಾಗಿದೆ. ಗ್ರಾಮದಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಮತದಾರರಿಲ್ಲ ಎಂದು ಮೀಸಲಾತಿ ಹಿನ್ನಲೆಯಲ್ಲಿ ಚುನಾವಣೆ ಬಹಿಷ್ಕರಿಸಲಾಗಿದೆ.
ನಗರ ಜಿಲ್ಲೆಯ 93 ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಜಿಲ್ಲಾಡಳಿತ ಸಿದ್ಧವಾಗಿದ್ದು, ಇದರಲ್ಲಿ 882 ಕ್ಷೇತ್ರಗಳಲ್ಲಿ 790 ಕ್ಷೇತ್ರಗಳ 2,011 ಸ್ಥಾನಗಳಿಗೆ 5,464 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ. 93 ಗ್ರಾಮ ಪಂಚಾಯಿತಿಗಳಲ್ಲಿ 882 ಕ್ಷೇತ್ರಗಳಿದ್ದು, 2,373 ಸ್ಥಾನಗಳಲ್ಲಿ 358 ಸ್ಥಾನಗಳಿಗೆ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚಿಕ್ಕಬಿದರಕಲ್ಲು ಗ್ರಾಮ ಪಂಚಾಯಿತಿಯ 8 ಕ್ಷೇತ್ರಗಳ ಎಲ್ಲ 29 ಸ್ಥಾನಗಳಿಗೆ ಅವಿರೋಧವಾಗಿ ಅಭ್ಯರ್ಥಿಗಳು ಆಯ್ಕೆಯಾಗಿರುವುದರಿಂದ ಮತದಾನ ನಡೆಯುತ್ತಿಲ್ಲ.
ಆನೇಕಲ್ ತಾಲೂಕಿನ ಗುಡ್ಡನಹಳ್ಳಿ ಹಾಗೂ ಭೂತಾನಹಳ್ಳಿಯಲ್ಲಿ ಎಲ್ಲ ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆದಿದ್ದಾರೆ. ಹಾಗೂ ವಿವಿದ ಕಾರಣಗಳಿಗೆ ಒಟ್ಟು 92 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿಲ್ಲ. ಉತ್ತರ ತಾಲೂಕಿನಲ್ಲಿ 119 ಕ್ಷೇತ್ರಗಳ 330 ಸ್ಥಾನ, ಉತ್ತರ ಅಪರ ತಾಲೂಕಿನಲ್ಲಿ 136 ಕ್ಷೇತ್ರಗಳ 334 ಸ್ಥಾನ, ದಕ್ಷಿಣ ತಾಲೂಕಿನಲ್ಲಿ 164 ಕ್ಷೇತ್ರಗಳ 435 ಸ್ಥಾನ, ಪೂರ್ವ ತಾಲೂಕಿನ 91 ಕ್ಷೇತ್ರಗಳ 234 ಸ್ಥಾನ ಹಾಗೂ ಆನೇಕಲ್ ತಾಲೂಕಿನ 280 ಕ್ಷೇತ್ರಗಳ 678 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ಐದು ತಾಲೂಕಿನಲ್ಲಿ 912 ಮತಗಟ್ಟೆಗಳಿದ್ದು, 306 ಸೂಕ್ಷ್ಮ ಹಾಗೂ 202 ಅತಿಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಲಾಗಿದೆ. ಜಿಲ್ಲೆಯಲ್ಲಿ 3,82,877 ಪುರುಷ ಮತದಾರರು, 3,53,527 ಮಹಿಳಾ ಮತದಾರರು ಹಾಗೂ ಮೂವರು ಇತರೆ ಮತದಾರರು ಸೇರಿದಂತೆ ಒಟ್ಟು 7,36,407 ಮತದಾರರಿದ್ದಾರೆ.
ನೀತಿ ಸಂಹಿತೆ ತಂಡ ರಚನೆ
ನೀತಿ ಸಂಹಿತೆ ಪಾಲನೆಗೆ ಆಯ್ಕೆ ತಾಲೂಕು ಪಂಚಾಯಿತಿಗಳ ಕಾರ್ಯನಿರ್ವಾಹಕ ಅಧಿಕಾರಿಗಳ ಮೇಲುಸ್ತುವಾರಿಯಲ್ಲಿ `ನೀತಿ ಸಂಹಿತೆ ತಂಡ' ರಚಿಸಲಾಗಿದೆ. ಮತಗಟ್ಟೆಗಳಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜಿಸಿದ್ದು, ಅತಿ ಸೂಕ್ಷ್ಮ ಮತಗಟ್ಟೆಗಳಲ್ಲಿ ವೀಡಿಯೋಗ್ರಾಫರ್ ಗಳನ್ನು ನಿಯೋಜಿಸಲಾಗಿದೆ. 2 ಕ್ಕಿಂತ ಹೆಚ್ಚು ಮತಗಟ್ಟೆಗಳಿರುವ ಕೇಂದ್ರಗಳಿಗೆ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ. 4,736 ಮತಗಟ್ಟೆ ಸಿಬ್ಬಂದಿ ಕರ್ತವ್ಯ ನಿರ್ವಹಿಸಲಿದ್ದಾರೆ.
ಬಿಗಿ ಭದ್ರತೆ
ಬೆಂಗಳೂರು: ಎರಡನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆಗೆ ಒಂದು ಪೊಲೀಸ್ ಕಮಿಷನರೇಟ್ ವ್ಯಾಪ್ತಿ ಹಾಗೂ 15 ಜಿಲ್ಲೆಗಳ ವ್ಯಾಪ್ತಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಮತದಾನ ಶಾಂತಿಯುತವಾಗಿ ನಡೆಸುವ ಉದ್ದೇಶದಿಂದ ಸೂಕ್ಷ್ಮ, ಅತಿ ಸೂಕ್ಷ್ಮ ಹಾಗೂ ಸಾಮಾನ್ಯ ಮಗಟ್ಟೆಗಳಲ್ಲೂ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಓಂಪ್ರಕಾಶ್ ತಿಳಿಸಿದ್ದಾರೆ.
2ನೇ ಹಂತದಲ್ಲಿ 3294 ಅತಿ ಸೂಕ್ಷ್ಮ, 4607 ಸೂಕ್ಷ್ಮ ಹಾಗೂ 11,18 ಸಾಮÁನ್ಯ ಮತಗಟ್ಟೆಗಳಿದ್ದು ಅವುಗಳಿಗೆ ಒಟ್ಟು 20,109 ಸಿಬ್ಬಂದಿ ನಿಯೋಜಿಸಲಾಗಿದೆಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


