ಜಿಲ್ಲಾ ಸುದ್ದಿ

ಕ್ಯಾಬ್ ಡಿಕ್ಕಿ: ಸ್ಥಳದಲ್ಲೇ ವ್ಯಕ್ತಿ ಸಾವು

ಮದುವೆ ಆಹ್ವಾನ ಪತ್ರಿಕೆ ನೀಡಲು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಕ್ಯಾಬ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬಳ್ಳಾರಿ ರಸ್ತೆ ಕಾಡಿಗೇನಹಳ್ಳಿ ಗೇಟ್ ಬಳಿ ಮಂಗಳವಾರ ಬೆಳಗ್ಗೆ ಸಂಭವಿಸಿದೆ...

ಕ್ಯಾಬ್ ಡಿಕ್ಕಿ: ಸ್ಥಳದಲ್ಲೇ ವ್ಯಕ್ತಿ ಸಾವು
ಏರ್ ಪೋರ್ಟ್ ಕ್ಯಾಬ್ ( ಸಾಂದರ್ಭಿಕ ಚಿತ್ರ)
Published On :

ಬೆಂಗಳೂರು: ಮದುವೆ ಆಹ್ವಾನ ಪತ್ರಿಕೆ ನೀಡಲು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಕ್ಯಾಬ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬಳ್ಳಾರಿ ರಸ್ತೆ ಕಾಡಿಗೇನಹಳ್ಳಿ ಗೇಟ್ ಬಳಿ ಮಂಗಳವಾರ ಬೆಳಗ್ಗೆ ಸಂಭವಿಸಿದೆ.

ವಿಜಯಪುರ ನಿವಾಸಿ ವೀರಪ್ಪ (50) ಮೃತ ದುರ್ದೈವಿ. ಸಹೋದರಿ ಮಗನ ಮದುವೆ ಆಮಂತ್ರಣ ಪತ್ರಿಕೆ ನೀಡಲು ಸೋಮವಾರ ಚಿಕ್ಕಜಾಲದ ಸಂಬಂಧಿಕರ ಮನೆಗೆ ಹೋಗಿದ್ದರು. ರಾತ್ರಿ ಅಲ್ಲೇ ಉಳಿದುಕೊಂಡು ಬೆಳಗ್ಗೆ ಊರಿಗೆ ವಾಪಸ್ಸಾಗಲು ರಸ್ತೆ ದಾಟುತ್ತಿದ್ದಾಗ ಏರ್ ಪೋರ್ಟ್ ಕಡೆಯಿಂದ ಬಂದ ಕ್ಯಾಬ್ ಡಿಕ್ಕಿ ಹೊಡೆದಿದೆ. ತಲೆಗೆ ಗಂಭೀರ ಪೆಟ್ಟಾಗಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಚಾಲಕ ನಾರಾಯಣಸ್ವಾಮಿ ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಚಿಕ್ಕಜಾಲ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಡ್ಡಾದಿಡ್ಡಿ ಬೈಕ್ ಚಾಲನೆ: ಸವಾರ ಬಲಿ

ಬೆಂಗಳೂರು: ಮತ್ತೊಂದು ಪ್ರಕರಣದಲ್ಲಿ ಸೋಮವಾರ ರಾತ್ರಿ ಆರ್.ಟಿ.ನಗರ ದೇವೇಗೌಡ ರಸ್ತೆಯಲ್ಲಿ ಸವಾರನ ನಿಯಂತ್ರಣ ಕಳೆದುಕೊಂಡು ಬೈಕ್ ಅಡ್ಡಾದಿಡ್ಡಿ ಚಲಿಸಿ ಪಾದಚಾರಿ ಮಾರ್ಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಅಫ್ರೋಜ್ ಅಹ್ಮದ್ (32) ಮೃತಪಟ್ಟಿದ್ದಾರೆ. ಸ್ನೇಹಿತ ಮಹೇಶ್ ಎಂಬಾತನಿಗೆ ಗಾಯಗಳಾಗಿವೆ. ಕೆಜಿ ಹಳ್ಳಿ ನಿವಾಸಿ ಅಫ್ರೋಜ್, ಮನೆ ಸಮೀಪದಲ್ಲಿ ಸೋಫಾ ತಯಾರಿಕೆ ಅಂಗಡಿ ಇಟ್ಟುಕೊಂಡಿದ್ದರು. ಕೆಲಸದ ಮೇಲೆ ಸ್ನೇಹಿತ ಮಹೇಶ್‍ನ ಜತೆ ಜೆ.ಸಿ ನಗರಕ್ಕೆ ಹೋಗಿ ರಾತ್ರಿ 12.30ರ ವೇಳೆಗೆ ಆರ್‍ಟಿ ನಗರದ ದೇವೇಗೌಡ ರಸ್ತೆಯಲ್ಲಿ ವಾಪಸ್ಸಾಗುತ್ತಿದ್ದಾಗ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರ್.ಟಿ.ನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.