ಜಿಲ್ಲಾ ಸುದ್ದಿ

ಲೋಕಾ ನಿರ್ದೇಶನ ಪಾಲಿಸದ ಬಿಬಿಎಂಪಿ ಆಯುಕ್ತರಿಗೆ ನೋಟಿಸ್

ಎಚ್‍ಎಎಲ್‍ನ ಯಮಲೂರು ಸಮೀಪ ರಾಜಕಾಲುವೆಗೆ ಬಿದ್ದು 10 ವರ್ಷದ ಬಾಲಕ ಜುನೈದ್ ಮೃತಪಟ್ಟಿರುವ ಪ್ರಕರಣ ಸಂಬಂಧ ಬಿಬಿಎಂಪಿ ಆಯುಕ್ತರು ಹಾಗೂ ಸಂಬಂಧಪಟ್ಟ ವಲಯದ ಜಂಟಿ ಆಯುಕ್ತರಿಗೆ ಲೋಕಾಯುಕ್ತರು ನೋಟಿಸ್ ಜಾರಿ ಮಾಡಿದ್ದಾರೆ...

ಲೋಕಾ ನಿರ್ದೇಶನ ಪಾಲಿಸದ ಬಿಬಿಎಂಪಿ ಆಯುಕ್ತರಿಗೆ ನೋಟಿಸ್
ಲೋಕಾಯುಕ್ತ
Published On :

ಬೆಂಗಳೂರು: ಎಚ್‍ಎಎಲ್‍ನ ಯಮಲೂರು ಸಮೀಪ ರಾಜಕಾಲುವೆಗೆ ಬಿದ್ದು 10 ವರ್ಷದ ಬಾಲಕ ಜುನೈದ್ ಮೃತಪಟ್ಟಿರುವ ಪ್ರಕರಣ ಸಂಬಂಧ ಬಿಬಿಎಂಪಿ ಆಯುಕ್ತರು ಹಾಗೂ ಸಂಬಂಧಪಟ್ಟ ವಲಯದ ಜಂಟಿ ಆಯುಕ್ತರಿಗೆ ಲೋಕಾಯುಕ್ತರು ನೋಟಿಸ್ ಜಾರಿ ಮಾಡಿದ್ದಾರೆ.

ನಗರ ವ್ಯಾಪ್ತಿಯಲ್ಲಿರುವ ಎಲ್ಲಾ ರಾಜಕಾಲುವೆಗಳಿಗೆ ನೆಲಮಟ್ಟದಿಂದ 6 ಅಡಿ ಎತ್ತರದ ಕಬ್ಬಿಣದ ತಂತಿ ತಡೆಗೋಡೆ ನಿರ್ಮಿಸಬೇಕು. ಅಲ್ಲದೇ ಅಪಾಯಕಾರಿಯಾಗಿರುವ ಜಾಗದಲ್ಲಿ ರೇಡಿಯಂ ಅಕ್ಷರಗಳಿಂದ ಬರೆದಿರುವ ಎಚ್ಚರಿಕೆ ಸೂಚನಾ ಫಲಕ ಅಂಟಿಸಬೇಕು ಎಂದು 2015, ಏಪ್ರಿಲ್‍ನಲ್ಲಿ ಬಿಬಿಎಂಪಿ ಆಯುಕ್ತರು ಹಾಗೂ ಸಂಬಂಧಪಟ್ಟ ಎಂಜಿನಿಯರ್ ಗಳೊಂದಿಗೆ ನಡೆದ ಸಭೆಯಲ್ಲಿ ಲೋಕಾಯುಕ್ತರು ನಿರ್ದೇಶನ ನೀಡಿದ್ದರು.

ಸೂಚನೆ ಪಾಲಿಸಲು ಮೇ 25 ಗಡುವು ನೀಡಲಾಗಿತ್ತು. ಆದರೆ, ಲೋಕಾಯುಕ್ತರ ನಿರ್ದೇಶನವನ್ನು ಪಾಲಿಸುವಲ್ಲಿ ಬಿಬಿಎಂಪಿ ಆಯುಕ್ತರು ಹಾಗೂ ಎಂಜಿನಿಯರ್‍ಗಳು ವಿಫಲರಾಗಿದ್ದಾರೆ. ಹೀಗಾಗಿಯೇ ತಡೆಗೋಡೆ ಇಲ್ಲದ ರಾಜ ಕಾಲುವೆ ಬಳಿ ಚೆಂಡು ಹಿಡಿಯಲು ಹೋಗಿ ಬಾಲಕ ಜುನೈಲ್ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದ. ಘಟನೆಗೆ ಸಂಬಂಧಿಸಿದಂತೆ ಹಾಗೂ ನಿರ್ದೇಶನಗಳನ್ನು ಪಾಲನೆ ಮಾಡದಿರುವ ಬಗ್ಗೆ ಜೂ.9ರೊಳಗೆ ವರದಿ ನೀಡುವಂತೆ ಬಿಬಿಎಂಪಿ ಆಯುಕ್ತರು ಹಾಗೂ ಸಂಬಂಧಪಟ್ಟ ವಲಯದ ಜಂಟಿ ಆಯುಕ್ತರಿಗೆ ಲೋಕಾಯುಕ್ತರು ನೋಟಿಸ್ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.