ಬೆಳಗ್ಗೆ ಪಂಚಾಯಿತಿ ಚುನಾವಣೆ ಫಲಿತಾಂಶ: ಗ್ರಾಮಗಳಲ್ಲಿ ಸೋಲು ಗೆಲುವಿನ ಲೆಕ್ಕಾಚಾರ
ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ಕಡ್ಡಾಯ ಮತದಾನ ಜಾರಿಯಾದ ನಂತರ ನಡೆದ ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶ ನಾಳೆ ಹೊರಬೀಳಲಿದೆ.

ಬೆಂಗಳೂರು: ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ಕಡ್ಡಾಯ ಮತದಾನ ಜಾರಿಯಾದ ನಂತರ ನಡೆದ ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶ ನಾಳೆ ಹೊರಬೀಳಲಿದೆ. ಅಭ್ಯರ್ಥಿಗಳಲ್ಲಿ ಸೋಲು ಗೆಲುವಿನ ಲೆಕ್ಕಾಚಾರ ಆರಂಭವಾಗಿದೆ.
ರಾಜ್ಯದ 5735 ಗ್ರಾಮ ಪಂಚಾಯತಿಗಳ 84, 854 ಸ್ಥಾನಗಳಿಗೆ 2 ಹಂತಗಳಲ್ಲಿ ಚುನಾವಣೆ ನಡೆದಿತ್ತು. ಶೇ.50 ಕ್ಕೂ ಹೆಚ್ಚು ಮಹಿಳೆಯರಿಗೆ ಅವಕಾಶ ಕಲ್ಪಿಸಿರುವ ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶದತ್ತ ಎಲ್ಲರ ಚಿತ್ತ ನೆಟ್ಟಿದೆ.
ನಾಳೆ ಬೆಳಗ್ಗೆ 8ಗಂಟೆಗೆ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ಸಂಜೆ 5 ಗಂಟೆ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ. 30 ಜಿಲ್ಲೆಗಳಲ್ಲಿ ತಲಾ 15 ಜಿಲ್ಲೆಗಳಂತೆ ಎರಡು ಹಂತಗಳಲ್ಲಿ ಚುನಾವಣೆ ನಡೆದಿತ್ತು. ಮೊದಲ ಹಂತದ ಚುನಾವಣೆಯಲ್ಲಿ ಶೇ.82.54 ರಷ್ಟು ಮತದಾನವಾಗಿತ್ತು. 2 ನೇ ಹಂತದಲ್ಲಿ ಶೇ. 80.38 ರಷ್ಟು ಮತದಾನ ನಡೆದಿತ್ತು.
ಪ್ರಮುಖ ರಾಜಕೀಯ ಪಕ್ಷಗಳಾದ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಗಳಿಗೆ ಚುನಾವಣೆ ಪ್ರತಿಷ್ಠೆಯ ವಿಷಯವಾಗಿದೆ. ಒಂದೇ ಮನೆಯಲ್ಲಿ 5 ಮಂದಿ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿರುವುದು ವರದಿಯಾಗಿದೆ. ಇನ್ನು ಪಂಚಾಯಿತಿ ಸಮರದಲ್ಲಿ ದಾಯಾದಿಗಳ ಕಲಹ, ಸಹೋದರರ ಸಂಘರ್ಷ, ಅತ್ತೆಸೊಸೆಯರೇ ಪರಸ್ಪರ ವಿರೋಧಿ ಅಭ್ಯರ್ಥಿಗಳಾಗಿ ಕಣಕ್ಕಿಳಿದಿರುವುದು ಕಂಡು ಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


