ವ್ಹೀಲಿಂಗ್ ಮಾಡುತ್ತಿದ್ದ 22 ಮಂದಿಯ ಬಂಧನ
ಷಬ್ ಎ ಬರಾತ್ ಹಬ್ಬದ ಆಚರಣೆ ನೆಪದಲ್ಲಿ ದ್ವಿಚಕ್ರ ವಾಹನಗಳಲ್ಲಿ ರೇಸಿಂಗ್, ವ್ಹೀಲಿಂಗ್, ತ್ರಿಬಲ್ ರೈಡಿಂಗ್ ಮಾಡುತ್ತ ಅಪಾಯಕಾರಿ ವಾಹನ ಚಾಲನೆ ಮಾಡುತ್ತಿದ್ದ ವಾಹನ ಸವಾರರ ವಿರುದ್ಧ ನಗರದ ಪೊಲೀಸರು 129 ಪ್ರಕರಣಗಳನ್ನು ದಾಖಲಿಸಿ 22 ಜನರನ್ನು ಬಂಧಿಸಿದ್ದಾರೆ...

ಬೆಂಗಳೂರು: ಷಬ್ ಎ ಬರಾತ್ ಹಬ್ಬದ ಆಚರಣೆ ನೆಪದಲ್ಲಿ ದ್ವಿಚಕ್ರ ವಾಹನಗಳಲ್ಲಿ ರೇಸಿಂಗ್, ವ್ಹೀಲಿಂಗ್, ತ್ರಿಬಲ್ ರೈಡಿಂಗ್ ಮಾಡುತ್ತ ಅಪಾಯಕಾರಿ ವಾಹನ ಚಾಲನೆ ಮಾಡುತ್ತಿದ್ದ ವಾಹನ ಸವಾರರ ವಿರುದ್ಧ ನಗರದ ಪೊಲೀಸರು 129 ಪ್ರಕರಣಗಳನ್ನು ದಾಖಲಿಸಿ 22 ಜನರನ್ನು ಬಂಧಿಸಿದ್ದಾರೆ.
ಪ್ರತಿ ವರ್ಷವೂ ಹಬ್ಬದ ವೇಳೆ ಅಪಘಾತಗಳು ಸಂಭವಿಸಿ ಅಪಾಯಕಾರಿ ಚಾಲನೆ ಮಾಡುವವರು ಅಪಘಾತಕ್ಕೀಡಾಗಿ ಪ್ರಾಣ ಕಳೆದುಕೊಳ್ಳುವುದಲ್ಲದೇ ಇತರ ರಸ್ತೆ ಬಳಕೆದಾರರ ಪ್ರಾಣಕ್ಕೂ ಕಂಟಕ ತರುತ್ತಿದ್ದರು.
ಈ ಹಿನ್ನೆಲೆಯಲ್ಲಿ ಮಂಗಳವಾರ (ಜೂ.2) ರಾತ್ರಿ ನಗರದಾದ್ಯಂತ ವಿಶೇಷ ಕಾರ್ಯಾಚರಣೆ ನಡೆಸಲಾಗಿತ್ತು ಎಂದು ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಡಾ ಎಂ.ಎ ಸಲೀಂ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


