ವಾಲಿಬಾಲ್ ಆಡುತ್ತಿದ್ದಾಗ ಕುಸಿದು ಬಿದ್ದು ವಿದ್ಯಾರ್ಥಿ ಸಾವು
ಅಸ್ತಮಾ ಕಾಯಿಲೆಯಿಂದ ಬಳಲುತ್ತಿದ್ದ 10ನೇ ತರಗತಿ ವಿದ್ಯಾರ್ಥಿಯೊಬ್ಬ ಶಾಲಾ ಆವರಣದಲ್ಲಿ ಆಟವಾಡುವಾಗ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬಾಗಲೂರಿನ ನಾರ್ಥ್ ಡೆಲ್ಲಿ ಪಬ್ಲಿಕ್ ಸ್ಕೂಲ್‍ನಲ್ಲಿ ನಡೆದಿದೆ...

ಬೆಂಗಳೂರು: ಅಸ್ತಮಾ ಕಾಯಿಲೆಯಿಂದ ಬಳಲುತ್ತಿದ್ದ 10ನೇ ತರಗತಿ ವಿದ್ಯಾರ್ಥಿಯೊಬ್ಬ ಶಾಲಾ ಆವರಣದಲ್ಲಿ ಆಟವಾಡುವಾಗ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬಾಗಲೂರಿನ ನಾರ್ಥ್ ಡೆಲ್ಲಿ ಪಬ್ಲಿಕ್ ಸ್ಕೂಲ್‍ನಲ್ಲಿ ನಡೆದಿದೆ.
ಪ್ರಕಾಶ್ ಜಾನ್ ಮ್ಯಾಥ್ಯುವ್ಸ್ (15) ಮೃತ ವಿದ್ಯಾರ್ಥಿ. ಶಾಲಾ ಆವರಣದಲ್ಲಿ ಮಂಗಳವಾರ ಮಧ್ಯಾಹ್ನ ಊಟದ ಸಮಯದಲ್ಲಿ ಸಹಪಾಠಿಗಳ ಜತೆ ವಾಲಿಬಾಲ್ ಆಟವಾಡುವಾಗ ಪ್ರಕಾಶ್ ಕುಸಿದು ಬಿದ್ದಿದ್ದ. ಕೂಡಲೇ ಆತನನ್ನು ಶಾಲಾ ಸಿಬ್ಬಂದಿ ಹೆಬ್ಬಾಳದ ಬ್ಯಾಪಿಸ್ಟ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಪ್ರಕಾಶ್ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾನೆ ಎಂದು ವೈದ್ಯರು ದೃಢಪಡಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಹೆಣ್ಣೂರು ಸಮೀಪದ ಚಿಕ್ಕಗುಬ್ಬಿಯ ಮಾಪ್ಲೆ ಗ್ರೀನ್ ಅಪಾರ್ಟ್‍ಮೆಂಟ್‍ನಲ್ಲಿ ತಾಯಿ ರೀನಿ ಮೇರಿ ಜತೆ ಪ್ರಕಾಶ್ ವಾಸವಾಗಿದ್ದರು. ತಂದೆ ಜಾನ್ ಮ್ಯಾಥ್ಯುವ್ ಅಮೆರಿಕದಲ್ಲಿ ಉದ್ಯೋಗದಲ್ಲಿದ್ದಾರೆ. ಹಲವು ದಿನಗಳಿಂದ ಪ್ರಕಾಶ್ ಅಸ್ತಮಾ ಹಾಗೂ ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದ. ಈ ಸಂಬಂಧ ಆತ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಅಸ್ತಮಾದಿಂದ ಬಳಲುತ್ತಿದ್ದರೂ ಹೆಚ್ಚು ಶ್ರಮ ಬೇಕಾಗುವ ವಾಲಿಬಾಲ್ ಆಟವಾಡಿದ್ದೇ ಪ್ರಕಾಶ್ ಸಾವಿಗೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಮೃತನ ತಾಯಿ ನೀಡಿದ ದೂರಿನ ಮೇರೆಗೆ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿರುವುದಾಗಿ ಬಾಗಲೂರು ಠಾಣೆ ಪೊಲೀಸರು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


