ನಂದಿತಾ ಸಾವು ಪ್ರಕರಣ ಗಲಭೆ: ಮಾಜಿ ಶಾಸಕ ಅರಗ ಜ್ಞಾನೇಂದ್ರ ವಿರುದ್ಧ ಚಾರ್ಜ್ ಶೀಟ್
ತೀರ್ಥಹಳ್ಳಿ ಬಾಲಕಿ ನಂದಿತ ಸಾವಿನ ಪ್ರಕರಣ ನಂತರ ನಡೆದ ಗಲಭೆ ಸಂಬಂಧ ಮಾಜಿ ಶಾಸಕ ಅರಗ ಜ್ಞಾನೇಂದ್ರ ಸೇರಿದಂತೆ 47 ಮಂದಿ ವಿರುದ್ಧ ಪೊಲೀಸರು ಜಾರ್ಜ್ ಶೀಟ್ ಸಲ್ಲಿಸಿದ್ದಾರೆ.

ಶಿವಮೊಗ್ಗ: ತೀರ್ಥಹಳ್ಳಿ ಬಾಲಕಿ ನಂದಿತ ಸಾವಿನ ಪ್ರಕರಣ ನಂತರ ನಡೆದ ಗಲಭೆ ಸಂಬಂಧ ಮಾಜಿ ಶಾಸಕ ಅರಗ ಜ್ಞಾನೇಂದ್ರ ಸೇರಿದಂತೆ 47 ಮಂದಿ ವಿರುದ್ಧ ಪೊಲೀಸರು ಶುಕ್ರವಾರ ಜಾರ್ಜ್ ಶೀಟ್ ಸಲ್ಲಿಸಿದ್ದಾರೆ. 2014 ರಲ್ಲಿ ನಂದಿತಾ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಹೀಗಾಗಿ ಇಡೀ ತೀರ್ಥಹಳ್ಳಿ ಹೊತ್ತಿ ಉರಿದಿತ್ತು.
8 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ನಂದಿತಾ 2014 ಅಕ್ಟೋಬರ್ 29 ರಂದು ಆನಂದಗಿರಿ ಬೆಟ್ಟದಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ನಂತರ ಆಕೆಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಅಕ್ಟೋಬರ್ 31 ರಂದು ನಂದಿತಾ ಸಾವನ್ನಪ್ಪಿದ್ದಳು. ನಂತರ ತೀರ್ಥಹಳ್ಳಿಯಲ್ಲಿ ದೊಡ್ಡ ಗಲಭೆಯೇ ನಡೆದಿತ್ತು. ಹೀಗಾಗಿ ಸುಮಾರು 15 ದಿನಗಳ ಕಾಲ ನಿಷೇದಾಜ್ಞೆ ಜಾರಿ ಮಾಡಲಾಗಿತ್ತು.
ಗಲಭೆ ಪ್ರಕರಣ ಸಂಬಂಧ ಮಾಜಿ ಶಾಸಕ ಅರಗ ಜ್ಞಾನೇಂದ್ರ ಸೇರಿದಂತೆ 47 ಜನರ ವಿರುದ್ಧ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.ಶಾಂತಿ ಭಂಗ, ಸಾರ್ವಜನಿಕ ಆಸ್ತಿ ನಷ್ಟ, ಪೊಲೀಸ್ ವಾಹನ ಜಖಂ ಹಾಗೂ 144 ಸೆಕ್ಷನ್ ಉಲ್ಲಂಘನೆ ಆರೋಪಗಳ ಅಡಿಯಲ್ಲಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ.
ಈ ಗಲಭೆಯ ನಂತರ ಸರ್ಕಾರ ನಂದಿತಾ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿತ್ತು. ವಿಚಾರಣೆ ನಡೆಸಿದ ಸಿಐಡಿ ಪೊಲೀಸರು ನಂದಿತಾ ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವರದಿ ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


