ಆನೆ ದಂತ ಮಾರುತ್ತಿದ್ದ ವ್ಯಕ್ತಿ ಸೆರೆ
ಆನೆ ದಂತ ಮಾರಾಟಕ್ಕೆ ಯತ್ನಿಸುತ್ತಿದ್ದ ಪಿ.ಶೇಖರ್ ಎಂಬಾತನನ್ನು ಬಂಧಿಸಿರುವ ಬಸವನಗುಡಿ ಪೊಲೀಸರು 15 ಕೆ.ಜಿ ತೂಕದ ಎರಡು ದೊಡ್ಡ ಗಾತ್ರದ ಆನೆ ದಂತಗಳನ್ನು ವಶಪಡಿಸಿಕೊಂಡಿದ್ದಾರೆ...

ಬೆಂಗಳೂರು: ಆನೆ ದಂತ ಮಾರಾಟಕ್ಕೆ ಯತ್ನಿಸುತ್ತಿದ್ದ ಪಿ.ಶೇಖರ್ ಎಂಬಾತನನ್ನು ಬಂಧಿಸಿರುವ ಬಸವನಗುಡಿ ಪೊಲೀಸರು 15 ಕೆ.ಜಿ ತೂಕದ ಎರಡು ದೊಡ್ಡ ಗಾತ್ರದ ಆನೆ ದಂತಗಳನ್ನು ವಶಪಡಿಸಿಕೊಂಡಿದ್ದಾರೆ.
ತಮಿಳುನಾಡಿನ ಧರ್ಮಪುರಿ ಮೂಲದ ಶೇಖರ್ ಹಾಗೂ ಸಹಚರ ಮಂಜುನಾಥ ಎಂಬುವರು ಹಳೇ ಕನಕಪುರ ರಸ್ತೆ ಕೃಷ್ಣರಾವ್ ಪಾರ್ಕ್ ಪೂರ್ವ ಗೇಟ್ ಬಳಿ ಆನೆ ದಂತ ಮಾರಾಟಕ್ಕೆ ಗ್ರಾಹಕರಿಗಾಗಿ ಹುಡುಕಾಡುತ್ತಿದ್ದರು. ಈ ಬಗ್ಗೆ ಮಾಹಿತಿ ಸಂಗ್ರಹಿಸಿದ ಬಸವನಗುಡಿ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಮಂಜುನಾಥ ಎಂಬಾತ ಪರಾರಿಯಾಗಿದ್ದಾನೆ.
ಯಾವ ಅರಣ್ಯದಲ್ಲಿ ಆನೆಗಳನ್ನು ಹತ್ಯೆಗೈದು ದಂತ ಕದಿಯಲಾಗಿತ್ತು ಎಂಬುದರ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


