ಮಾಹಿತಿ ನೀಡಿದ್ದಕ್ಕೆ ಸ್ನೇಹಿತನ ಹತ್ಯೆ
ಅಪರಾಧ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಮಾಹಿತಿ ನೀಡಿದ ವಿಚಾರಕ್ಕೆ ಸ್ನೇಹಿತರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಪೀಣ್ಯದಲ್ಲಿ ನಡೆದಿದೆ...

ಬೆಂಗಳೂರು:ಅಪರಾಧ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಮಾಹಿತಿ ನೀಡಿದ ವಿಚಾರಕ್ಕೆ ಸ್ನೇಹಿತರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಪೀಣ್ಯದಲ್ಲಿ ನಡೆದಿದೆ.
ಪೀಣ್ಯ ಸಮೀಪದ ಟಿ.ದಾಸರಹಳ್ಳಿ ನಿವಾಸಿ ಅತೀಫ್ ಪಾಷ (20) ಕೊಲೆಯಾದವನು. ಆರೋಪಿಗಳಾದ ಮೌಲಾ, ರಾಕಿ ಹಾಗೂ ಇನ್ನಿಬ್ಬರು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಬ್ಬನ್‍ಪಾರ್ಕ್, ಅಶೋಕನಗರ, ಪೀಣ್ಯ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಕಳವು ಪ್ರಕರಣಗಳಲ್ಲಿ ಭಾಗಿಯಾಗಿರುವ ಅತೀಫ್, ಚಿಕ್ಕಬಾಣಾವರದಲ್ಲಿ ಗ್ಯಾರೇಜ್ ಇಟ್ಟುಕೊಂಡಿದ್ದ. ತಲೆಮರೆಸಿಕೊಂಡಿರುವ ಆರೋಪಿ ಮೌಲಾ ಕೂಡಾ ಹಲವು ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ.
ಇತ್ತೀಚೆಗೆ ಕಳ್ಳತನ ಪ್ರಕರಣವೊಂದರಲ್ಲಿ ವಿಚಾರಣೆಗಾಗಿ ಪೀಣ್ಯ ಪೊಲೀಸರು ಮೌಲಾನನ್ನು ಠಾಣೆಗೆ ಕರೆದೊಯ್ದಿದ್ದರು.ಆಗ ಮೌಲಾ, ಈ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ. ಅತೀಫ್ ಈ ಕಳವು ಮಾಡಿರಬಹುದೆಂಬ ಮಾಹಿತಿ ಪೊಲೀಸರಿಗೆ ನೀಡಿದ್ದ. ಹೀಗಾಗಿ ಅತೀಫ್ನನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದ್ದರು. ಪೊಲೀಸರ ಬಳಿ ತನ್ನ ಹೆಸರು ಹೇಳಿದ್ದರಿಂದ ಕುಪಿತಗೊಂಡಿದ್ದ ಅತೀಫ್, ಶುಕ್ರವಾರ ಸಂಜೆ 7 ಗಂಟೆ ಸುಮಾರಿಗೆ ಟಿ.ದಾಸರಹಳ್ಳಿಯಲ್ಲಿರುವ ಮೌಲಾನ ಮನೆ ಬಳಿ ತೆರಳಿ ಗಲಾಟೆ ಮಾಡಿದ್ದ. ಸ್ಥಳೀಯರು ಮಧ್ಯಪ್ರವೇಶಿಸಿ ಜಗಳ ಬಿಡಿಸಿದ್ದರು. ಆದರೆ, ಸಹಚರರನ್ನು ಸ್ಥಳಕ್ಕೆ ಕರೆಸಿಕೊಂಡ ಆರೋಪಿ ಮೌಲಾ, ಅತೀಫ್ ನ ಎದೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದ.
ಗಾಯಗೊಂಡಿದ್ದ ಅತೀಫ್ ನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಿಸದೆ ತಡರಾತ್ರಿ 1.45ರ ಸುಮಾರಿಗೆ ಅತೀಫ್ ಮೃತಪಟ್ಟಿದ್ದಾನೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಪೀಣ್ಯ ಪೊಲೀಸರು ತಿಳಿಸಿದ್ದಾರೆ. ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


