ಜಿಲ್ಲಾ ಸುದ್ದಿ

ಸಿಇಟಿ ಸೀಟು ಹಂಚಿಕೆ ವಿರೋಧಿಸಿ ವೈದ್ಯಕೀಯ ವಿದ್ಯಾರ್ಥಿಗಳ ಪ್ರತಿಭಟನೆ

ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ಹಂಚಿಕೆ ಮಾಡಲಾದ ಸೀಟು ಹಂಚಿಕೆಯನ್ನು ವಿರೋಧಿಸಿರುವ ಹಲವು ವಿದ್ಯಾರ್ಥಿಗಳು ಸೋಮವಾರ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಚೇರಿಯ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ...

ಸಿಇಟಿ ಸೀಟು ಹಂಚಿಕೆ ವಿರೋಧಿಸಿ ವೈದ್ಯಕೀಯ ವಿದ್ಯಾರ್ಥಿಗಳ ಪ್ರತಿಭಟನೆ
ಸಿಇಟಿ ಸೀಟು ಹಂಚಿಕೆ ವಿರೋಧಿಸಿ ವೈದ್ಯಕೀಯ ವಿದ್ಯಾರ್ಥಿಗಳ ಪ್ರತಿಭಟನೆ (ಸಾಂದರ್ಭಿಕ ಚಿತ್ರ)
Published On :

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ಹಂಚಿಕೆ ಮಾಡಲಾದ ಸೀಟು ಹಂಚಿಕೆಯನ್ನು ವಿರೋಧಿಸಿರುವ ಹಲವು ವಿದ್ಯಾರ್ಥಿಗಳು ಸೋಮವಾರ  ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಚೇರಿಯ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.

ಸಿಇಟಿ ಸೀಟು ಹಂಚಿಕೆ ಕುರಿತಂತೆ ಅಸಮಧಾನದಿಂದ ವ್ಯಕ್ತಪಡಿಸಿರುವ ವಿದ್ಯಾರ್ಥಿಗಳ ಗುಂಪೊಂದು ಪರೀಕ್ಷಾ ಪ್ರಾಧಿಕಾರ ಕಚೇರಿ ಬಳಿ ಬಂದು, ಇದ್ದಕ್ಕಿದ್ದಂತೆ ಕಚೇರಿಯನ್ನು ಮುತ್ತಿಗೆ ಹಾಕಲು ಯತ್ನ ನಡೆಸಿತು. ನಂತರ ಪೊಲೀಸರು ಮಧ್ಯ ಪ್ರವೇಶಿಸಿ ವಿದ್ಯಾರ್ಥಿಗಳ ಯತ್ನವನ್ನು ವಿಫಲವಾಗುವಂತೆ ಮಾಡಿದರು. ನಂತರ ಅಸಮಧಾನಗೊಂಡಿದ್ದ ಕೆಲವು ವಿದ್ಯಾರ್ಥಿಗಳು ಪ್ರಾಧಿಕಾರದ ಆಡಳಿತಾಧಿಕಾರಿ ಎಸ್.ಎನ್.ಗಂಗಾಧರಯ್ಯ ಅವರೊಂದಿಗೆ ವಾಗ್ವಾದಕ್ಕಿಳಿದರು. ಸೀಟಿ ಹಂಚಿಕೆ ಪ್ರಕ್ರಿಯೆ ಸರಿಯಾದ ರೀತಿಯಲ್ಲಿ ನಡೆದಿಲ್ಲ, ಸೀಟು ಹಂಚಿಕೆಯಿಂದ ಹಲವು ವಿದ್ಯಾರ್ಥಿಗಳಿಗೆ ಮೋಸವಾಗಿದೆ ಎಂದು ಹೇಳಿದ ವಿದ್ಯಾರ್ಥಿಗಳ ಗುಂಪು ಮತ್ತೊಮ್ಮೆ ಸೀಟು ಹಂಚಿಕೆ  ಕಾರ್ಯವಾಗಬೇಕೆಂದು ಪಟ್ಟುಹಿಡಿದು ಮತ್ತೆ ಪ್ರತಿಭಟನೆಯನ್ನು ಮುರಿಸಿದ್ದಾರೆ.  .
 
ಸಿಇಟಿ ಬಳಿಕ ಅರ್ಹ ಅಭ್ಯರ್ಥಿಗಳಿಗೆ ಸೀಟು ಹಂಚಿಕೆ ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಈಗಾಗಲೇ 3 ಸುತ್ತಿನ ಸಿಇಟಿ ಸೀಟು ಹಂಚಿಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಇದು ವಿದ್ಯಾರ್ಥಿಗಳಲ್ಲಿ ಅಸಮಧಾನ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು ಧರಣಿ ಕುಳಿತಿದ್ದಾರೆ.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.