ಜಿಲ್ಲಾ ಸುದ್ದಿ

ಕೊಲೆ ಬೆದರಿಕೆ: ಕವಿವಿ ಡೀನ್ ನೂರಜಾಹನ್ ಬಂಧನ

ವಿದ್ಯಾರ್ಥಿಗೆ ಕೊಲೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ವಿಶ್ವವಿದ್ಯಾಲಯದ ಶಿಕ್ಷಣ ವಿಭಾಗದ ಡೀನ್ ಪ್ರೊ. ನೂರಜಾಹನ್...

ಕೊಲೆ ಬೆದರಿಕೆ: ಕವಿವಿ ಡೀನ್ ನೂರಜಾಹನ್ ಬಂಧನ
ಪ್ರೊ.ನೂರಜಹಾನ್‌
Published On :

ಧಾರವಾಡ: ವಿದ್ಯಾರ್ಥಿಗೆ ಕೊಲೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ವಿಶ್ವವಿದ್ಯಾಲಯದ ಶಿಕ್ಷಣ ವಿಭಾಗದ ಡೀನ್ ಪ್ರೊ. ನೂರಜಾಹನ್ ಗನಿಯಾರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ತನ್ನ ವಿರುದ್ಧದ ಪ್ರಕರಣ ವಾಪಸ್ ಪಡೆಯುವಂತೆ ಪಿಎಚ್‌ಡಿ ಹಳೆ ವಿದ್ಯಾರ್ಥಿಗೆ ಕೊಲೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನೂರಜಾಹನ್ ಅವರನ್ನು ಹುಬ್ಬಳ್ಳಿ ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ.

ನೂರಜಾಹನ್ ಅವರು ತನಗೆ ಕೊಲೆ ಬೆದರಿಕೆ ಹಾಕಿರುವುದಾಗಿ ಪಿಎಚ್‌ಡಿ ವಿದ್ಯಾರ್ಥಿನಿ ಸಬಿಯಾ ಅವರು ವಿದ್ಯಾನಗರ ಪೊಲೀಸ್ ಠಾಣೆ ದೂರು ನೀಡಿದ್ದರು.

ಈ ಹಿಂದೆ ಪಿಎಚ್‌ಡಿ ವಿದ್ಯಾರ್ಥಿಗಳಿಗೆ ಲಂಚ ಕೇಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ನೂರಜಾಹನ್, ಜಾಮೀನಿನ ಮೇಲೆ ಹೊರ ಬಂದಿದ್ದರು.

ಪಿಎಚ್‌ಡಿ ಪ್ರಮಾಣ ಪತ್ರ ನೀಡಲು ಪ್ರೊ.ನೂರಜಹಾನ್‌ ಅವರು ಉತ್ತರ ಭಾರತದ ಇಬ್ಬರು ವಿದ್ಯಾರ್ಥಿಗಳಿಂದ ನಾಲ್ಕು ಲಕ್ಷ ರೂ. ಲಂಚ ಕೇಳಿದ್ದರು. ಕೇವಲ ಇಬ್ಬರು ವಿದ್ಯಾರ್ಥಿಗಳಿಂದ ಮಾತ್ರವಲ್ಲದೆ, ಹಲವು ವಿದ್ಯಾರ್ಥಿಗಳಿಂದ ಲಂಚ ಪಡೆದಿದ್ದಾರೆ ಎಂಬ ಆರೋಪವಿದೆ. ಈ ಕುರಿತು ವಿದ್ಯಾರ್ಥಿಗಳು ಮೊಬೈಲ್‌ನಲ್ಲಿ ರೆಕಾರ್ಡ್‌ ಮಾಡಿಕೊಂಡು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‌ ಮತ್ತು ಕುಲಪತಿಗೆ ದೂರು ನೀಡಿದ್ದರು. ಬಳಿಕ ಲೋಕಾಯುಕ್ತರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.