ಜಿಲ್ಲಾ ಸುದ್ದಿ

ನಾನೇನು ನಿದ್ದೆ ಮಾಡ್ತಿಲ್ಲ: ಕಿಮ್ಮನೆ ರತ್ನಾಕರ

ನನ್ನನ್ನು ಸಂಪುಟದಿಂದ ಕೈ ಬಿಡಲಾಗುತ್ತದೆ ಎಂಬ ಚರ್ಚೆ ಮಾಧ್ಯಮದಲ್ಲಿ ನಡೆಯುತ್ತಿದೆಯೇ ವಿನಃ ಪಕ್ಷದೊಳಗೆ ಅಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಹೇಳಿದ್ದಾರೆ...

ನಾನೇನು ನಿದ್ದೆ ಮಾಡ್ತಿಲ್ಲ: ಕಿಮ್ಮನೆ ರತ್ನಾಕರ
ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ
Published On :

ಬೆಂಗಳೂರು: ನನ್ನನ್ನು ಸಂಪುಟದಿಂದ ಕೈ ಬಿಡಲಾಗುತ್ತದೆ ಎಂಬ ಚರ್ಚೆ ಮಾಧ್ಯಮದಲ್ಲಿ ನಡೆಯುತ್ತಿದೆಯೇ ವಿನಃ ಪಕ್ಷದೊಳಗೆ ಅಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಹೇಳಿದ್ದಾರೆ.

ಪ್ರದೇಶ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರ ಅಹವಾಲು ಆಲಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿ, ಹಗಲು-ರಾತ್ರಿ ನಿದ್ದೆ ಬಿಟ್ಟು ನಾನು ಕೆಲಸ ಮಾಡಿದ್ದೇನೆ. ಅದಾಗಿಯೂ ಸಚಿವರ ಮೌಲ್ಯಮಾಪನ ನಡೆದಿದೆ. ನನ್ನನ್ನು ಸಂಪುಟದಿಂದ ಕೈ ಬಿಡಲಾಗುತ್ತದೆ ಎಂಬ ಚರ್ಚೆ ಮಾಧ್ಯಮದಲ್ಲಿ ನಡೆಯುತ್ತಿದೆ. ನಾನು ಶಿಕ್ಷಣ ಸಚಿವನಾದ ನಂತರ ಜೂ.1ರಂದು ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಪಠ್ಯಪುಸ್ತಕವನ್ನು ಸಮರ್ಪಕವಾಗಿ ಒದಗಿಸಲಾಗುತ್ತಿದೆ. ಮಧ್ಯಾಹ್ನದ ಬಿಸಿಯೂಟ ಯೋಜನೆ ಅನುಷ್ಠಾನದಲ್ಲಿ ಕರ್ನಾಟಕ ದೇಶದಲ್ಲೇ ನಂಬರ್ ಒನ್ ಇದೆ. ನಾನು ನಿದ್ದೆ ಮಾಡ್ತಿಲ್ಲ. ಹಾರ್ಡ್ ವರ್ಕ್ ಮಾಡ್ತಾ ಇದ್ದೇನೆ. ಕಾಗೇರಿಯವರು ಸಮರ್ಥರಾಗಿದ್ದವರು. ಆದರೆ ಇಲಾಖೆಯಲ್ಲಿರುವ ಕಡತಗಳನ್ನು ಯಾಕೆ ಕ್ಲಿಯರ್ ಮಾಡದೇ ಉಳಿಸಿದರು? ಬಿ.ಇಡಿ ಸಮಸ್ಯೆಯನ್ನು ಏಕೆ ಬಗೆಹರಿಸಲಿಲ್ಲ ಎಂದು ಪ್ರಶ್ನಿಸಿದರು.

ದ್ವಿತೀಯ ಪಿಯು ಪರೀಕ್ಷೆಯ 30 ಸಾವಿರ ಉತ್ತರ ಪತ್ರಿಕೆಗಳನ್ನು ಮರು ಮೌಲ್ಯಮಾಪನ ಮಾಡಲಾಗಿದೆ. ಜೂ.15ರಂದು ಮೊದಲ ಹಂತದಲ್ಲಿ ಬೆಳಗ್ಗೆ 11 ಗಂಟೆಗೆ ಇಲಾಖೆ ವೆಬ್‍ಸೈಟ್ ನಲ್ಲಿ ಫಲಿತಾಂಶ ಪ್ರಕಟ ಮಾಡಲಾಗುವುದು. ಜೂ.17ಕ್ಕೆ ಎರಡನೇ ಹಂತದಲ್ಲಿ ಹಾಗೂ ಜೂ.19 ರಂದು ಮರು ಮೌಲ್ಯಮಾಪನದ ಎಲ್ಲ ಫಲಿತಾಂಶವನ್ನು ಪ್ರಕಟಿಸಲಾಗುವುದು. ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ತಿಂಗಳಾಂತ್ಯಕ್ಕೆ ಮುಕ್ತಾಯಗೊಳ್ಳುತ್ತದೆ. ರಾಜ್ಯ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿರುವ ಹೊಸ ಕಾಯ್ದೆ ಪ್ರಕಾರವೇ ವರ್ಗಾವಣೆ ನಡೆಯುತ್ತದೆ. ಪಿಯು ಉಪನ್ಯಾಸಕರ ನೇಮಕಕ್ಕೆ ಅರ್ಜಿ ಸಲ್ಲಿಸಲು ಜೂ.30ರವರೆಗೂ ಅವಧಿ ವಿಸ್ತರಿಸಲಾಗಿದೆ. ಮೀಸಲು ಸೌಲಭ್ಯ ಕಲ್ಪಿಸಲು ಅವಧಿ ವಿಸ್ತರಿಸಲಾಗಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.