ಪಿಯುಸಿ ಮರು ಮೌಲ್ಯಮಾಪನ ಮೊದಲ ಹಂತದ ಫಲಿತಾಂಶ ಇಂದು
2014-15ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಮರು ಮೌಲ್ಯ ಮಾಪನದ ಮೊದಲ ಹಂತದ ಫಲಿತಾಂಶ ಸೋಮವಾರ ಪ್ರಕಟಗೊಳ್ಳಲಿದೆ..

ಬೆಂಗಳೂರು: 2014-15ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಮರು ಮೌಲ್ಯ ಮಾಪನದ ಮೊದಲ ಹಂತದ ಫಲಿತಾಂಶ ಸೋಮವಾರ ಪ್ರಕಟಗೊಳ್ಳಲಿದೆ.
ಭಾನುವಾರ ಪದವಿಪೂರ್ವ ಶಿಕ್ಷಣ ಇಲಾಖೆಗೆ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕಿಮ್ಮನೆ ರತ್ನಾಕರ್, ದ್ವಿತೀಯ ಪಿಯುಸಿ ಮರು ಮೌಲ್ಯಮಾಪನದ ಫಲಿತಾಂಶವನ್ನು ಸೋಮವಾರ ಪ್ರಕಟಿಸಲಾಗುತ್ತಿದ್ದು, ಇಲಾಖೆ ವೆಬ್‍ಸೈಟ್‍ನಲ್ಲಿ ಫಲಿತಾಂಶ ವೀಕ್ಷಿಸಬಹುದೆಂದು ತಿಳಿಸಿದ್ದಾರೆ.
ಮರುಮೌಲ್ಯಮಾಪನಕ್ಕೆ ಈವರೆಗೂ ಅರ್ಜಿಗಳು ಬರುತ್ತಲೇ ಇವೆ. ಹೀಗಾಗಿ ಹೊಸ ಅರ್ಜಿಗಳ ಮೌಲ್ಯಮಾಪನ ಪ್ರಕ್ರಿಯೆಯೂ ಚಾಲನೆಯಲ್ಲಿದೆ. ಈವರೆಗೂ ನಡೆದ ಮೌಲ್ಯಮಾ್ಪನದ ಫಲಿತಾಂಶವನ್ನು ಭಾನುವಾರ ಪ್ರಕಟಿಸುವುದಾಗಿ ಭರವಸೆ ನೀಡಲಾಗಿತ್ತು. ಆದರೆ, ರಜೆ ಇರುವುದರಿಂದ ಸೋಮವಾರ ಎಲ್ಲಾ ಕಾಲೇಜುಗಳಲ್ಲಿ ಬೆಳಗ್ಗೆ 11 ಗಂಟೆ ನಂತರ ಫಲಿತಾಂಶ ಲಭ್ಯವಾಗಲಿದೆ ಎಂದರು.
ಎರಡನೇ ಹಂತದ ಫಲಿತಾಂಶವನ್ನು ಜೂನ್ 17ರಂದು ಪ್ರಕಟಿಸಲಾಗುವುದು. ಉಳಿದ ಎಲ್ಲಾ ಅರ್ಜಿಗಳ ಫಲಿತಾಂಶ ಜೂ.19ರಂದು ಪ್ರಕಟಗೊಳಿಸಲಾಗುತ್ತದೆ ಎಂದು ತಿಳಿಸಿದರು. ಸಿಇಟಿ ರ್ಯಾಂಕಿಂಗ್‍ಗೆ ಯಾವುದೇ ತೊಂದರೆಯಾಗದಂತೆ ಮರು ಮೌಲ್ಯಮಾಪನದ ಫಲಿತಾಂಶವನ್ನು ಪರೀಕ್ಷಾ ಪ್ರಾಧಿಕಾರಕ್ಕೆ ಕಳುಹಿಸಲಾಗುತ್ತದೆ. ಹೀಗಾಗಿ ಜೂ.20ರಂದು ಸಿಇಟಿ ಸ್ಪಾಟ್ ರ್ಯಾಂಕಿಂಗ್ ಪ್ರಕಟಗೊಳ್ಳಲಿ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


