ಜಿಲ್ಲಾ ಸುದ್ದಿ

ಮುಂದುವರಿದ ಸಿಎಂ ನಗರ ವೀಕ್ಷಣೆ, ಯೋಜನೆ ಘೋಷಣೆ

ಭಾನುವಾರ ರಜಾ ದಿನವಾಗಿರುವುದರಿಂದ ಅಂದು ಬೆಂಗಳೂರು ನಗರ ಸಂಚಾರ ನಡೆಸಿದರೆ ಟ್ರಾಫಿಕ್ ಮೇಲೆ ಅಷ್ಟೊಂದು ವ್ಯತಿರಿಕ್ತ ಪರಿಣಾಮ ಬೀರದು. ಸಾರ್ವಜನಿಕರಿಗೆ ಹೆಚ್ಚಿನ ತೊಂದರೆಯಾಗದು ಎಂದು ಸಿದ್ದರಾಮಯ್ಯ ಘ ನಿರ್ಧಾರಕ್ಕೆ ಬಂದಿದ್ದಾರೆ...

ಮುಂದುವರಿದ ಸಿಎಂ ನಗರ ವೀಕ್ಷಣೆ, ಯೋಜನೆ ಘೋಷಣೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ನಗರ ಪ್ರದಕ್ಷಿಣೆ ನಡೆಸಿದರು
Published On :

ಬೆಂಗಳೂರು:ಇನ್ನು ಮುಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿ ಭಾನುವಾರ ಬೆಂಗಳೂರು ನಗರ ವೀಕ್ಷಣೆ ಮಾಡಲಿದ್ದಾರೆ. ಸೋಮವಾರ ಶಾಂತಿನಗರ ಮತ್ತು ಶಿವಾಜಿನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಅವರು ನಗರ ಪ್ರದಕ್ಷಿಣೆ ನಡೆಸಿದರು.

 ಭಾನುವಾರ ರಜಾ ದಿನವಾಗಿರುವುದರಿಂದ ಅಂದು ಬೆಂಗಳೂರು ನಗರ ಸಂಚಾರ ನಡೆಸಿದರೆ ಟ್ರಾಫಿಕ್ ಮೇಲೆ ಅಷ್ಟೊಂದು ವ್ಯತಿರಿಕ್ತ ಪರಿಣಾಮ ಬೀರದು. ಸಾರ್ವಜನಿಕರಿಗೆ ಹೆಚ್ಚಿನ ತೊಂದರೆಯಾಗದು ಎಂದು ಸಿದ್ದರಾಮಯ್ಯ ನಿರ್ಧಾರಕ್ಕೆ ಬಂದಿದ್ದಾರೆ.

ಯೋಜನೆ ಘೋಷಣೆ:
ಶಿವಾಜಿನಗರದ ರಿಚರ್ಡ್ಸ್ ಮಾರುಕಟ್ಟೆಯಲ್ಲಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿಗಳು,ಪಿಪಿಪಿ ಮಾದರಿಯಲ್ಲಿ ವಾಣಿಜ್ಯ ಸಂಕೀರ್ಣ ಹಾಗೂ ಫುಡ್ ಪಾರ್ಕ್ ನಿರ್ಮಿಸಬೇಕೆಂದು ಬಿಬಿಎಂಪಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ರಿಚರ್ಡ್ ಮಾರುಕಟ್ಟೆ ಸೂಕ್ತ ವ್ಯವಸ್ಥೆಯಿಲ್ಲದೆ ಹದಗೆಟ್ಟಿದ್ದು, ಮಾರುಕಟ್ಟೆಯನ್ನು ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳಬೇಕು. ಇದಕ್ಕಾಗಿ ಯೋಜನೆಯ ಪ್ರಸ್ತಾವ ಸಿದ್ದಪಡಿಸಬೇಕೆಂದು ಹೇಳಲಾಗಿದೆ ಎಂದು ಅವರು ತಿಳಿಸಿದರು.

ರಕ್ಷಣಾ ಇಲಾಖೆಯ ಭೂಮಿ ಪಡೆಯಲು ಕ್ರಮ ಕೈಗೊಳ್ಳಬೇಕೆಂದು ಅಲ್ಲಿದ್ದ ಅಧಿಕಾರಿಗಳಿಗೆ ತಿಳಿಸಿದರು. ರಕ್ಷಣಾ ಇಲಾಖೆಯ ಭೂಮಿ ಇರುವ ಕಡೆ ರಸ್ತೆಗಳು ಹದಗೆಟ್ಟಿದ್ದು ಅವುಗಳನ್ನು ಸರಿಪಡಿಸಲು ಕ್ರಮ ಕೈಗೊಳ್ಳಲಾಗುವುದು. ಈಜಿಪುರದಲ್ಲಿ ವಸತಿ ತೆರವು ಮಾಡಿದವರಿಗೆ 18 ತಿಂಗಳೊಳಗೆ ಪುನರ್ವಸತಿ ಕಲ್ಪಿಸಬೇಕು ಎಂದು ಹೇಳಿದರು.

ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ:
ಶಿವಾಜಿನಗರದ ಬ್ರಾಡ್ ವೇ ರಸ್ತೆ ಬಳಿ 'ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ' ನಿರ್ಮಿಸಲು ಸಂಪುಟದಲ್ಲಿ ತೀರ್ಮಾನಿಸಿದ್ದು, ನಾರಾಯಣ ಹೃದಯಾಲಯ 20 ಕೋಟಿ ವೆಚ್ಚದಲ್ಲಿ ಉಪಕರಣಗಳನ್ನು ನೀಡಲು ಮುಂದೆ ಬಂದಿದೆ. ಶಿವಾಜಿನಗರದಲ್ಲಿ ಜನದಟ್ಟಣೆ ಹೆಚ್ಚಿರುವುದರಿಂದ ಇಲ್ಲಿ 12 ಕೋಟಿ ರೂಪಾಯಿ ವೆಚ್ಚದಲ್ಲಿ ಮಲ್ಟಿ ಸ್ಪೆಷಾಲಿಟಿ ಅಸ್ಪತ್ರೆ ನಿರ್ಮಿಸಲು ನಿರ್ಧರಿಸಲಾಗಿದೆ.

ಕಟ್ಟಡವನ್ನು ಸರ್ಕಾರ ನಿರ್ಮಿಸಬೇಕಿದ್ದು, ಆಸ್ಪತ್ರೆಯನ್ನು ವೈದ್ಯಕೀಯ ಉಪಕರಣಗಳೊಂದಿಗೆ ನಾರಾಯಣ ಹೃದಯಾಲಯ ನಿರ್ಮಾಣ ಮಾಡಲಿದೆ. ಹೃದಯ ಹಾಗೂ ಮೂತ್ರಕೋಶ ಸಂಬಂಧಿತ ರೋಗಗಳಿಗೆ ಚಿಕಿತ್ಸೆ ನೀಡಲಾಗುತ್ತದೆ. ಕಟ್ಟಡ ಕಾಮಗಾರಿ ಆರಂಭಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಥಳ ಪರಿಶೀಲನೆ ನಂತರ ಅಧಿಕಾರಿಗಳಿಗೆ ತಿಳಿಸಿದರು.

ಹಲಸೂರು ಜೋಗಪಾಳ್ಯದ ಹೆರಿಗೆ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಿ ಎನ್ ಯು ಎಚ್ ಎಂ ಅಡಿ 1.40 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ನೂತನ ಪ್ರಯೋಗಾಲಯವನ್ನು ಮುಖ್ಯಮಂತ್ರಿ ವೀಕ್ಷಿಸಿದರು. ಆಸ್ಪತ್ರೆಯನ್ನು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲು ಮನವಿ ಬಂದಿದ್ದು, ಸರ್ಕಾರದ ಮಟ್ಟದಲ್ಲಿ ಚರ್ಚಿಸಲಾಗುವುದು ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.