ಜಿಲ್ಲಾ ಸುದ್ದಿ

ಬೆಂಗಳೂರಿನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ..!

ಪುಟ್ಟ ಬಾಲಕಿ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಮಾಡಿರುವ ಪ್ರಕರಣ ಗುರುವಾರ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.

ಬೆಂಗಳೂರಿನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ..!
ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ
Published On :

ಬೆಂಗಳೂರು: ಪುಟ್ಟ ಬಾಲಕಿ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಮಾಡಿರುವ ಪ್ರಕರಣ ಗುರುವಾರ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.

ರಾಜಧಾನಿ ಬೆಂಗಳೂರನ್ನು ಬೆಚ್ಚಿ ಬೀಳಿಸುವಂಥ ಘಟನೆ ನಡೆದಿದ್ದು, ಅಪ್ರಾಪ್ತ ಬಾಲಕಿಯೋರ್ವಳನ್ನು ಮೂವರು ದುರುಳರು ಸೇರಿ ಸಾಮೂಹಿಕವಾಗಿ ಅತ್ಯಾಚಾರ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಜೆಪಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಬೆಳಕಿಗೆ ಬಂದಿದ್ದು, ಪ್ರಕರಣ ಸಂಬಂಧ ತಮಿಳುನಾಡು ಮೂಲದ ಮೂವರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಮೂಲಗಳ ಪ್ರಕಾರ ಮೂವರು ಆರೋಪಿಗಳ ಪೈಕಿ ಓರ್ವ ಆರೋಪಿ ಬಾಲಕಿಯನ್ನು ಪ್ರೀತಿಸುವಂತೆ ನಾಟಕ ಮಾಡಿದ್ದ. ಅಲ್ಲದೆ ಮದುವೆಯಾಗುವುದಾಗಿ ಹೇಳಿ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ತನ್ನ ಸ್ನೇಹಿತರೊಂದಿಗೆ ಸಾಮೂಹಿಕವಾಗಿ ಅತ್ಯಾಚಾರ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ಬಂಧಿತರನ್ನು ಅಸಯ್, ಅಜಯ್ ಹಾಗೂ ಸಂತೋಷ್ ಎಂದು ಗುರುತಿಸಲಾಗಿದ್ದು, ಪ್ರಾಥಮಿಕ ತನಿಖೆಯಲ್ಲಿ ಬಂಧಿತರು ತಮಿಳುನಾಡು ಮೂಲದವರೆಂದು ತಿಳಿದುಬಂದಿದೆ.

ಬಂಧಿತರಿಂದ ಮಾಹಿತಿ ಪಡೆಯಲಾಗಿದೆ: ಎಂಎನ್ ರೆಡ್ಡಿ
ಇದೇ ಪ್ರಕರಣ ಸಂಬಂಧ ಬೆಂಗಳೂರು ಪೊಲೀಸ್ ಆಯುಕ್ತ ಎಂಎನ್ ರೆಡ್ಡಿ ಅವರು ಸುದ್ದಿಗಾರರಿಗೆ ಮಾಹಿತಿ ನೀಡಿದ್ದು, ಮೂವರನ್ನು ಬಂಧಿಸಿ ತನಿಖೆ ನಡೆಸಲಾಗುತ್ತಿದೆ. ನಿನ್ನೆ ಈ ಪ್ರಕರಣ ನಡೆದಿದ್ದು, ಸುದ್ದಿ ತಿಳಿದ ತಕ್ಷಣವೇ ಸಂಬಂಧಿಸಿದ ಪೊಲೀಸ್ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ ಎಂದು ಹೇಳಿದರು.

ಘಟನಾ ಸ್ಥಳಕ್ಕೆ ನಟಿ ತಾರಾ ಭೇಟಿ
ಇದೇ ವೇಳೆ ಘಟನಾ ಸ್ಥಳಕ್ಕೆ ಭೇಟಿ ನೀಡಿದ ನಟಿ ತಾರಾ ಅವರು, ಬಾಲಕಿ ಪೋಷಕರಿಗೆ ಸಾಂತ್ವನ ಹೇಳಿದ್ದಾರೆ. ಅಲ್ಲದೆ ಅತ್ಯಾಚಾರದಂತಹ ಹೀನ ಕೃತ್ಯಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ಕೊಗೊಳ್ಳಬೇಕು ಎಂದು ತಾರಾ ಸರ್ಕಾರವನ್ನು ಆಗ್ರಹಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.