ಜಿಲ್ಲಾ ಸುದ್ದಿ

ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ

ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಎಸ್ಜಿಎಸ್ ಅಂತಾರಾಷ್ಟ್ರೀಯ ಯೋಗ ಪ್ರತಿಷ್ಠಾನದ ವಿದ್ಯಾರ್ಥಿಗಳು ನಗರದ ಪ್ರೆಸ್ ಕ್ಲಬ್ ನಲ್ಲಿಂದು ಯೋಗ ಪ್ರದರ್ಶನ...

ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ
ಪತ್ರಿಕಾಗೋಷ್ಠಿ ನಡೆಸಿದ ಯೋಗ ಗುರು ಆಚಾರ್ಯ ನಿರಂಜನಮೂರ್ತಿ
Published On :

ಬೆಂಗಳೂರು: ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಎಸ್ಜಿಎಸ್ ಅಂತಾರಾಷ್ಟ್ರೀಯ ಯೋಗ ಪ್ರತಿಷ್ಠಾನದ ವಿದ್ಯಾರ್ಥಿಗಳು ನಗರದ ಪ್ರೆಸ್ ಕ್ಲಬ್ ನಲ್ಲಿಂದು ಯೋಗ ಪ್ರದರ್ಶನ ನಡೆಸಿದರು.
ಸಂಸ್ಥೆಯ ಮುಖ್ಯಸ್ಥ ಹಾಗು ಯೋಗ ಗುರು ಆಚಾರ್ಯ ನಿರಂಜನಮೂರ್ತಿ ಮಾತನಾಡಿ, ಯೋಗಕ್ಕೆ ಸ್ಪರ್ಧಾಗುಣ ನೀಡಿದರೆ ಅಬಾಲವೃದ್ಧರಾದಿಯಾಗಿ ಎಲ್ಲರೂ ಯೋಗದತ್ತ ಆಕರ್ಷಿತರಾಗುತ್ತಾರೆ. ಈ ನಿಟ್ಟಿನಲ್ಲಿ ಸಂಸ್ಥೆ ನಿರಂತರ ಯೋಗಸ್ಪರ್ಧೆಗಳನ್ನು ನಡೆಸುತ್ತಿದೆ ಎಂದು ತಿಳಿಸಿದರು.
ನಾಳೆ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುವ ಅಂತಾರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮದಲ್ಲಿ ನಮ್ಮ ಸಂಸ್ಥೆಯ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಅಲ್ಲಿ ನಡೆಯುವ ಸ್ಪರ್ಧೆಯಲ್ಲಿ ಭಾಗವಹಿಸುವವರಿಗೆ ತಲಾ ಮೂರು ಆಸನ ಪ್ರದರ್ಶಿಸಲು ಅವಕಾಶ ನೀಡಲಾಗುವುದು. 9 ವಯೋವಿಭಾಗದಲ್ಲಿ ಪುರುಷರ ಹಾಗೂ ಮಹಿಳೆಯರಿಗೆ ಪ್ರತ್ಯೇಕವಾಗಿ ನಡೆಯುತ್ತಿದೆ. ಭಾಗವಹಿಸಿದ ಎಲ್ಲರಿಗೂ  ಪ್ರಮಾಣ ಪತ್ರ ನೀಡಲಾಗುವುದು ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಚೀನಾದ ಬೀಜಿಂಗ್ನಲ್ಲಿ ಜೂ.21ರಿಂದ 25ರವರೆಗೆ ನಡೆಯುವ ವಿಶ್ವ ಯೋಗ ಚಾಂಪಿಯನ್ ಶಿಪ್  ಮುಖ್ಯ ತೀರ್ಪುಗಾರನಾಗಿ ಭಾಗವಹಿಸುತ್ತಿರುವುದಾಗಿ ಅವರು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.