ಜಿಲ್ಲಾ ಸುದ್ದಿ

ಚುನಾವಣೆ ನಂತರವೂ ನಗರ ಸಂಚಾರ: ಸಿಎಂ ಸಿದ್ದು

ಬಿಬಿಎಂಪಿ ಚುನಾವಣೆ ನಂತರವೂ ನಗರ ಪ್ರದಕ್ಷಿಣೆ ಮಾಡಿ ಜನರ ಸಮಸ್ಯೆ ಆಲಿಸುವುದಾಗಿ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಚುನಾವಣೆ ನಂತರವೂ ನಗರ ಸಂಚಾರ: ಸಿಎಂ ಸಿದ್ದು
ಮುಖ್ಯಮಂತ್ರಿ ಸಿದ್ದರಾಮಯ್ಯ
Published On :

ಬೆಂಗಳೂರು: ಬಿಬಿಎಂಪಿ ಚುನಾವಣೆ ನಂತರವೂ ನಗರ ಪ್ರದಕ್ಷಿಣೆ ಮಾಡಿ ಜನರ ಸಮಸ್ಯೆ ಆಲಿಸುವುದಾಗಿ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ದಿನ ನಗರ ಪ್ರದಕ್ಷಿಣೆ ಸಾಧ್ಯವಾಗಿರಲಿಲ್ಲ. ಈಗ ನಿರಂತರವಾಗಿ ಮಾಡುತ್ತಿದ್ದು, ಇದು ಮುಂದಿನ ದಿನಗಳಲ್ಲಿಯೂ ನಿಲ್ಲುವುದಿಲ್ಲ. ಹಾಗೆಂದ ಮಾತ್ರಕ್ಕೆ ಇದು ಕೊನೆಯೂ ಅಲ್ಲ. ಬಿಬಿಎಂಪಿ ಚುನಾವಣೆ ದಿನಾಂಕ ನಿಗದಿಯಾಗುವವರೆಗೂ ನಿರಂತರವಾಗಿ ನಡೆಸಲಾಗುತ್ತದೆ. ದಿನಾಂಕ ಹೊರಬಿದ್ದ ನಂತರ ಸ್ಥಗಿತಗೊಳಿಸಲಾಗುವುದು. ನಂತರ ಮತ್ತೆ ಮುಂದುವರೆಸಲಾಗುವುದು. ನಗರದ ಎಲ್ಲಾ ಬಡಾವಣೆಗಳಿಗೆ ಭೇಟಿ ನೀಡಿ, ಜನರ ಸಮಸ್ಯೆ ಆಲಿಸಲಾಗುವುದು ಸಿದ್ದರಾಮಯ್ಯ ಹೇಳಿದರು.

ಭಾನುವಾರ ನಗರದ ಮೂರು ವಿಧಾನ ಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಸಂಚಾರ ನಡೆಸಿದಾಗ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.