ಸಕ್ಕರೆ ಕಾರ್ಖಾನೆ ವಿರುದ್ಧ ಕಠಿಣ ಕ್ರಮ ಅಸಾಧ್ಯ: ಸಿದ್ದರಾಮಯ್ಯ
ಎಫ್ಆರ್‍ಪಿಗೆ ರಾಜ್ಯ ಸರ್ಕಾರ ಜವಾಬ್ದಾರಿಯಲ್ಲ, ಕಳೆದ ವರ್ಷದ ಬಾಕಿಗಷ್ಟೇ ಹೊಣೆ ಬಾಗಲಕೋಟೆ: ರೈತರಿಗೆ ಕಬ್ಬಿನ ಬಾಕಿ ಹಣ ಕೊಡಿಸಲು ತೀರಾ ಕಠಿಣ ಕ್ರಮ ಕೈಗೊಳ್ಳುವುದು ಅಸಾಧ್ಯ. ಕಾರ್ಖಾನೆಗಳಿಗೆ ಬೀಗ ಜಡಿದು, ಮeಲೀಕರ ವಿರುದ್ಧ ಎಫ್ಐಆರ್ ದಾಖಲಿಸಿದರೆ ಸಮಸ್ಯೆ ಪರಿಹಾರವಾಗುತ್ತದೆಯೇ?...

ಬಾಗಲಕೋಟೆ: ರೈತರಿಗೆ ಕಬ್ಬಿನ ಬಾಕಿ ಹಣ ಕೊಡಿಸಲು ತೀರಾ ಕಠಿಣ ಕ್ರಮ ಕೈಗೊಳ್ಳುವುದು ಅಸಾಧ್ಯ. ಕಾರ್ಖಾನೆಗಳಿಗೆ ಬೀಗ ಜಡಿದು, ಮಾಲೀಕರ ವಿರುದ್ಧ ಎಫ್ಐಆರ್ ದಾಖಲಿಸಿದರೆ ಸಮಸ್ಯೆ ಪರಿಹಾರವಾಗುತ್ತದೆಯೇ? ಹೀಗೆಂದು ಪ್ರಶ್ನಿಸಿದವರು ಮುಖ್ಯಮಂತ್ರಿ ಸಿದ್ದರಾಮಯ್ಯ. ಒಂದು ವೇಳೆ ಕಠಿಣ ಕ್ರಮ ಕೈಗೊಂಡು ಕಾರ್ಖಾನೆ ಬಾಗಿಲು ಮುಚ್ಚಿದರೆ, ಮುಂದಿನ ವರ್ಷ ಕಬ್ಬು ಅರೆಯುವವರು ಯಾರು ಎಂದು ಕೇಳಿದ್ದಾರೆ.
ಸೋಮವಾರ ಆಲಮಟ್ಟಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಈಗಾಗಲೇ ರೈತರು ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಕಬ್ಬು ಹಾಕಿದ್ದಾರೆ. ರೈತ ಹಾಗೂ ಕಾರ್ಖಾನೆ ಮಾಲೀಕ ಇಬ್ಬರನ್ನೂ ಪರಿಗಣನೆಗೆ ತೆಗೆದುಕೊಂಡು ಸಮಸ್ಯೆ ಬಗೆಹರಿಸಬೇಕಿದೆ. ಪ್ರತಿಭಟನೆ, ಹೋರಾಟದಿಂದ ಸಮಸ್ಯೆ ಮತ್ತಷ್ಟು ಜಟಿಲವಾಗುತ್ತದೆಯೇ ವಿನಃ ಪರಿಹಾರ ಸಿಕ್ಕುವುದಿಲ್ಲ ಎಂದು ಹೇಳಿದರು.
ಪ್ರಸ್ತುತ ಸಕ್ಕರೆ ದರ ಕುಸಿತ ಕಂಡಿದ್ದು ಕಾರ್ಖಾನೆ ಮಾಲೀಕರು ಅದನ್ನೇ ಬಲವಾಗಿ ಪ್ರತಿಪಾದಿಸುತ್ತಿದ್ದಾರೆ. ಹೀಗಿರುವಾಗ ಕಠಿಣ ನಿರ್ಧಾರ ತೆಗೆದುಕೊಳ್ಳುವುದು ಕಷ್ಟ ಎಂದ ಅವರು, ಕಬ್ಬು ಪೂರೈಸಿದ ರೈತರಿಗೆ ಸಕ್ಕರೆ ಕಾರ್ಖಾನೆಗಳು ನೀಡಬೇಕಾಗಿರುವ ಎಫ್ಆರ್ಪಿ ದರವನ್ನು ಕೇಂದ್ರ ಸರ್ಕಾರ ನಿಗದಿ ಮಾಡಿದ್ದು, ಅದಕ್ಕೆ ರಾಜ್ಯ ಸರ್ಕಾರ ಜವಾಬ್ದಾರಿಯಲ್ಲ.
ಈ ವಿಷಯದಲ್ಲಿ ಮಧ್ಯಪ್ರವೇಶ ಮಾಡಿ ಸಮಸ್ಯೆ ಇತ್ಯರ್ಥಪಡಿಸುವಂತೆ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರಲ್ಲಿ ಮನವಿ ಮಾಡಿಕೊಳ್ಳಲಾಗುವುದು. ಕಬ್ಬು ಬೆಳೆಗಾರರಿಗೆ ಕಳೆದ ವರ್ಷ ಕೊಡಬೇಕಾದ ಮೊತ್ತ ರು.2400 ಕೋಟಿ. ಇದಕ್ಕೆ ಮಾತ್ರ ರಾಜ್ಯ ಸರ್ಕಾರದ ಜವಾಬ್ದಾರಿ. ಬಾಕಿ ವಸೂಲಿ ಸಂಬಂಧ ಸಕ್ಕರೆ ವಶಕ್ಕೆ ತೆಗೆದು ಕೊಂಡು ಮಾರಾಟ ಮಾಡುವಂತೆ ಸಂಬಂಧಿಸಿದ ಡಿಸಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


