ಮಾದಕ ವಸ್ತು: ಇಬ್ಬರ ಬಂಧನ
ಮಾದಕವಸ್ತು ಎಂಡಿ ಎಂಎ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಬಂಧಿಸಿರುವ ಸಿಸಿಬಿ ಪೊಲೀಸರು ರು.15 ಲಕ್ಷ ಮೌಲ್ಯದ 100 ಗ್ರಾಂ ಪೌಡರ್ ವಶಪಡಿಸಿಕೊಂಡಿದ್ದಾರೆ...

ಬೆಂಗಳೂರು: ಮಾದಕವಸ್ತು ಎಂಡಿ ಎಂಎ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಬಂಧಿಸಿರುವ ಸಿಸಿಬಿ ಪೊಲೀಸರು ರು.15 ಲಕ್ಷ ಮೌಲ್ಯದ 100 ಗ್ರಾಂ ಪೌಡರ್ ವಶಪಡಿಸಿಕೊಂಡಿದ್ದಾರೆ.
ಕೇರಳದ ತಿರುವನಂತಪುರದ ರಾಮ್ಸ್ ಮೋನ್ (27) ಹಾಗೂ ವೈನಾಡಿನ ಹಜಿನಾಸ್ (23) ಬಂಧಿತರು. ಆರೋಪಿಗಳು ಮಡಿವಾಳ ತಾವರೆಕೆರೆ ಸ್ವರಾಜ್ ಹೈಪರ್ ಮಾರುಕಟ್ಟೆ ಮುಂಭಾಗದಲ್ಲಿ ಮಾದಕವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ಸಿಸಿಬಿ ಅಧಿಕಾರಿಗಳಿಗೆ ಮಾಹಿತಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಇವರಿಂದ ಮಾದಕ ವಸ್ತು ಜತೆಗೆ ರು.2300 ನಗದು, 1 ಬೈಕ್, ಎಲೆಕ್ಟ್ರಾನಿಕ್ ತೂಕದ ಯಂತ್ರ ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಮುಂಬೈನಲ್ಲಿರುವ ಮಹಮ್ಮದ್ ಅಲಿ ಎಂಬಾತನಿಂದ ಎಂಡಿಎಂಎ ಪೌಡರ್ ಖರೀದಿಸಿ ನಗರಕ್ಕೆ ತರುತ್ತಿದ್ದ ಆರೋಪಿಗಳು, 1 ಗ್ರಾಂ ಹಾಗೂ ಅರ್ಧ ಗ್ರಾಂ ತೂಕದ ಸಣ್ಣ ಸಣ್ಣ ಪ್ಯಾಕೆಟ್ ಮಾಡಿ 1 ಪ್ಯಾಕೆಟ್‍ಗೆ ರು.10ರಿಂದ ರು.15 ಸಾವಿರಕ್ಕೆ ಮಾರಾಟ ಮಾಡುತ್ತಿದ್ದರು. ಹೆಚ್ಚಾಗಿ ನಗರದ ಐಟಿ ಬಿಟಿ ಕಚೇರಿಗಳು. ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡಲು ತಂದಿದ್ದಾಗಿ ವಿಚಾರಣೆ ವೇಳೆ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


