ಸ್ಮಾರ್ಟ್ ಸಿಟಿಗಳಾಗಿ ಪೀಣ್ಯ, ವೈಟ್‍ಫೀಲ್ಡ್
ಬೆಂಗಳೂರಿನ ಪೀಣ್ಯ ಮತ್ತು ವೈಟ್‍ಫೀಲ್ಡ್ ಪ್ರದೇಶವನ್ನು ಸ್ಮಾರ್ಟ್ ಸಿಟಿಯಾಗಿ ರೂಪಿಸಬೇಕೆಂದು ಕೇಂದ್ರ ಸಚಿವ ವೆಂಕಯ್ಯನಾಯ್ಡು ಅವರೊಂದಿಗೆ...

ಬೆಂಗಳೂರು: ಬೆಂಗಳೂರಿನ ಪೀಣ್ಯ ಮತ್ತು ವೈಟ್‍ಫೀಲ್ಡ್ ಪ್ರದೇಶವನ್ನು ಸ್ಮಾರ್ಟ್ ಸಿಟಿಯಾಗಿ ರೂಪಿಸಬೇಕೆಂದು ಕೇಂದ್ರ ಸಚಿವ ವೆಂಕಯ್ಯನಾಯ್ಡು ಅವರೊಂದಿಗೆ ಚರ್ಚಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಯಶವಂತಪುರದ ಡಾ. ಪ್ರಭಾಕರ ಕೋರೆ ಕನ್ವೆನ್ಷನ್ ಸೆಂಟರ್‍ನಲ್ಲಿ ಪೀಣ್ಯ ಕೈಗಾರಿಕಾ ಸಂಘ
ಗುರುವಾರ ಆಯೋಜಿಸಿದ್ದ ರಾಷ್ಟ್ರೀಯ ಮಟ್ಟದ ವ್ಯಾಪಾರ ಅಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ
ನೀಡಿ ಮಾತನಾಡಿದ ಅವರು, ಬೆಂಗಳೂರಿನಲ್ಲೇ ಎರಡು ಸ್ಮಾರ್ಟ್ ಸಿಟಿ ಮಾಡಬೇಕೆಂದು
ಒತ್ತಾಯಿಸಿದ್ದೇವೆ. ರಾಜ್ಯ ಸರ್ಕಾರ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಕೇಂದ್ರಕ್ಕೆ ಮನವರಿಕೆ ಮಾಡಿಕೊಟ್ಟಿದ್ದೇವೆ ಎಂದು ತಿಳಿಸಿದರು.
ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಟೌನ್‍ಶಿಪ್ ಮಾಡಬೇಕೆಂಬ ಒತ್ತಾಯ ಇದ್ದು, ಈ ವಿಚಾರವನ್ನು
ಗಂಭೀರವಾಗಿ ಪರಿಗಣಿಸುವುದಾಗಿ ತಿಳಿಸಿದರಲ್ಲದೇ, ಟ್ರೇಡ್ ಲೈಸೆನ್ಸ್ ವಿಚಾರದಲ್ಲಿ ಅನಗತ್ಯ ತೊಂದರೆ ನಿವಾರಿಸಲು ಕ್ರಮಕೈಗೊಳ್ಳಲಾಗುತ್ತಿದೆ ಎಂದರು.
ಕೈಗಾರಿಕೆಗಳಿಗೆ ಭೂಮಿ-ಹೆಚ್ಚಿನ ಚರ್ಚೆ: ಕೈಗಾರಿಕೆಗಳಿಗೆ ನೀಡುವ ನಿವೇಶನವನ್ನು ಲೀಸ್
ಕಮï ಸೇಲ್ ವಿಚಾರ ಕ್ಯಾಬಿನೆಟ್‍ನಲ್ಲೂ ಸಾಕಷ್ಟು ಚರ್ಚೆಯಾಯಿತು. ಅನೇಕರು ಬೇರೆ ಬೇರೆ
ಅಭಿಪ್ರಾಯ ವ್ಯಕ್ತಪಡಿಸಿದ್ದರು. ನಾನೂ ಕೂಡ ಹಿಂದೆ ಸದನದಲ್ಲಿ ಈ ರೀತಿಯ ಕ್ರಮದ ಬಗ್ಗೆ ದನಿ
ಎತ್ತಿದ್ದೆ. ಏಕೆಂದರೆ, ಅನೇಕರು ಕೈಗಾರಿಕೆಗೆ ಕೊಟ್ಟ ಜಾಗವನ್ನು ಮಾರಿಕೊಂಡಿದ್ದರು,
ರಾಜಾಜಿನಗರದಲ್ಲಿ ಮದುವೆ ಮಂಟಪಗಳಾಗಿ ಬದಲಾಗಿವೆ. ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ
ಇನ್ನಷ್ಟು ಚರ್ಚೆ ಮಾಡುತ್ತೇವೆ ಎಂದರು. ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಸ್ನೇಹಿ
ವಾತಾವರಣವಿದ್ದು, ಸರ್ಕಾರವು ಕೈಗಾರಿಕಾ ಕ್ಷೇತ್ರಕ್ಕೆ ಎಲ್ಲಾ ರೀತಿಯ ಸಹಕಾರ ನೀಡಲಿದೆ. ಇಲ್ಲಿ
ಸೃಷ್ಟಿಯಾಗುವ ಕೌಶಲ್ಯಯುತ ಮಾನವ ಸಂಪನ್ಮೂಲ ಬೇರೆಲ್ಲೂ ಸಿಗುವುದಿಲ್ಲ. ಹೀಗಾಗಿ ಹೆಚ್ಚುಹೆಚ್ಚು ಬಂಡವಾಳ ಹೂಡಿಕೆದಾರರು ಇತ್ತ ಬರುತ್ತಿದ್ದಾರೆ. ಅಲ್ಲದೇ, ಕೈಗಾರಿಕೆ ಹೆಚ್ಚಾದರೆ
ಉದ್ಯೋಗ ಸೃಷ್ಟಿಯಾಗುತ್ತದೆ, ಇದರಿಂದ ಆರ್ಥಿಕ ಚಟುವಟಿಕೆಯೂ ವೃದ್ಧಿಯಾಗುವ ಜೊತೆಗೆ ನಾಡಿನ ಸಂಪತ್ತು ಕೂಡ ವೃದ್ಧಿಯಾಗುತ್ತದೆ, ನಮ್ಮ ಸರ್ಕಾರ ಈ ನಿಟ್ಟಿನಲ್ಲಿ ಎಲ್ಲಾ ರೀತಿಯ ಪ್ರೋತ್ಸಾಹ ನೀಡುತ್ತದೆ ಎಂದು ಅವರು ಹೇಳಿದರು.
ಅನೇಕರು ಈ ಸಿದ್ದರಾಮಯ್ಯ ಹಳ್ಳಿಪರ ಎಂದೆಲ್ಲಾ ಅಪಪ್ರಚಾರ ಮಾಡುತ್ತಾರೆ. ಆದರೆ,
ಸಮಗ್ರವಾಗಿ ಅಭಿವೃದ್ಧಿಯಾಗಬೇಕೆಂದು ಬಯಸುವವನು ನಾನು. ಕೃಷಿ, ಕೈಗಾರಿಕೆ ಮತ್ತು
ಸೇವಾ ಕ್ಷೇತ್ರ ಸಹ ಬೆಳವಣಿಗೆಯಾಗಬೇಕು. ಆಗ ಸಮಗ್ರ ಅಭಿವೃದ್ಧಿ ಸಾಧ್ಯವಿದೆ ಎಂದ ಅವರು,
ಕೈಗಾರಿಕೆಗೆ ಉತ್ತೇಜನ ಕೊಡುವ ವಿಚಾರದಲ್ಲಿ ಯಾರೂ ಅನುಮಾನ ಪಡುವ ಅಗತ್ಯವಿಲ್ಲ
ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


