ಜಿಲ್ಲಾ ಸುದ್ದಿ

ಪ್ರಾಧಿಕಾರವೇ ರಾಷ್ಟ್ರೀಯ ಹೆದ್ದಾರಿ ನಿರ್ವಹಿಸಬೇಕು: ಹೈಕೋರ್ಟ್

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಾಯ್ದೆ ಹಾಗೂ ನಿಯಮದಂತೆ ಸಂಬಂಧಪಟ್ಟ ಪ್ರಾಧಿಕಾರವೇ ರಾಷ್ಟ್ರೀಯ ಹೆದ್ದಾರಿಗಳನ್ನು ನಿರ್ವಹಿಸಬೇಕು ಹೈಕೋರ್ಟ್ ಆದೇಶ

ಪ್ರಾಧಿಕಾರವೇ ರಾಷ್ಟ್ರೀಯ ಹೆದ್ದಾರಿ ನಿರ್ವಹಿಸಬೇಕು: ಹೈಕೋರ್ಟ್
ಹೈಕೋರ್ಟ್
Published On :

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಾಯ್ದೆ ಹಾಗೂ ನಿಯಮದಂತೆ ಸಂಬಂಧಪಟ್ಟ ಪ್ರಾಧಿಕಾರವೇ ರಾಷ್ಟ್ರೀಯ ಹೆದ್ದಾರಿಗಳನ್ನು ನಿರ್ವಹಿಸಬೇಕು ಎಂದು ಹೈಕೋರ್ಟ್ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.

ಮೈಸೂರು ಮಡಿಕೇರಿ ಮಾರ್ಗದಲ್ಲಿ ಹಾಡು ಹೋಗುವ ರಾಷ್ಟ್ರೀಯ ಹೆದ್ದಾರಿ 275 ಬೆಂಗಳೂರು- ಬಂಟ್ವಾಳ ರಸ್ತೆ ಸರಿಯಾಗಿ ನಿರ್ವಹಣೆ ಮಾಡದ ಪರಿಣಾಮ ಹದಗೆಟ್ಟಿದ್ದು ಸಂಬಂಧಪಟ್ಟ ಪ್ರಾಧಿಕಾರಕ್ಕೆ ರಸ್ತೆ ಮಾರ್ಗ ಸರಿಪಡಿಸಲು ಸೂಚಿಸಬೇಕೆಂದು ಕೋರಿ ಜೆ.ಡಿ ನಂಜಪ್ಪ ಎಂಬುವವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿದ್ದರು.

ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾ.ಎಸ್.ಕೆ ಮುಖರ್ಜಿ ಮತ್ತು ನ್ಯಾ.ಬಿ.ವಿ ನಾಗರತ್ನ ಅವರಿದ್ದ ವಿಭಾಗೀಯ ಪೀಠ, ಈಗಾಗಲೇ ಆರಂಭವಾಗಿರುವ ರಸ್ತೆ ದುರಸ್ತಿ ಕಾಮಗಾರಿಯನ್ನು ಚುರುಕುಗೊಳಿಸುವಂತೆ ಸರ್ಕಾರಕ್ಕೆ ಸೂಚಿಸಿದೆ. ಅಲ್ಲದೇ ಹೆದ್ದಾರಿ ಮಧ್ಯದಲ್ಲಿ(ಛೇದನ) ಕಡ್ಡಾಯವಾಗಿ ಮಿಣುಕು ದೀಪ ಅಳವಡಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಿ ಅರ್ಜಿ ಇತ್ಯರ್ಥಪಡಿಸಿದೆ.

ಅರ್ಜಿ ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ಪ್ರಧಾನ ಸರ್ಕಾರಿ ವಕೀಲರಾದ ಆರ್ ದೇವದಾಸ್ ವಾದ ಮಂಡಿಸಿ ರಸ್ತೆ ಅಭಿವೃದ್ಧಿಪಡಿಸಲು ಸರ್ಕಾರ ಸಾಕಷ್ಟು ಕ್ರಮ ಕೈಗೊಂಡಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.