ಮೋದಿಗೆ ದೇಶಪಾಂಡೆ ಅಭಿನಂದನಾ ಪತ್ರ
ಕರ್ನಾಟಕಕ್ಕೆ ಐಐಟಿ ಹಾಗೂ ಹಂಪಿ ಅಭಿವೃದ್ಧಿಗೆ ವಿಶೇಷ ಅನುದಾನವನ್ನು ಈ ಬಾರಿಯ ಬಜೆಟ್‍ನಲ್ಲಿ ನೀಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಉನ್ನತ ಶಿಕ್ಷಣ ಹಾಗೂ ಪ್ರವಾಸೋದ್ಯಮ ಸಚಿವ ಆರ್.ವಿ.ದೇಶಪಾಂಡೆ ಅಭಿನಂದನಾ ಪತ್ರ ಬರೆದಿದ್ದಾರೆ...
ಬೆಂಗಳೂರು: ಕರ್ನಾಟಕಕ್ಕೆ ಐಐಟಿ ಹಾಗೂ ಹಂಪಿ ಅಭಿವೃದ್ಧಿಗೆ ವಿಶೇಷ ಅನುದಾನವನ್ನು ಈ ಬಾರಿಯ ಬಜೆಟ್‍ನಲ್ಲಿ ನೀಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಉನ್ನತ ಶಿಕ್ಷಣ ಹಾಗೂ ಪ್ರವಾಸೋದ್ಯಮ ಸಚಿವ ಆರ್.ವಿ.ದೇಶಪಾಂಡೆ ಅಭಿನಂದನಾ ಪತ್ರ ಬರೆದಿದ್ದಾರೆ.
ರಾಜ್ಯ ಸರ್ಕಾರದ ಬಹು ವರ್ಷಗಳ ಬೇಡಿಕೆಗೆ ಕೇಂದ್ರ ಸ್ಪಂದಿಸಿದೆ. ಕೇಂದ್ರದ ಇವೆರಡು ಯೋಜನೆಗಳಿಗೆ ರಾಜ್ಯ ಸಂಪೂರ್ಣ ಸಹಕಾರ ನೀಡಲಿದೆ. ಈ ಹಿಂದೆ ಹೇಳಿದಂತೆ ಐಐಟಿಗೆ ಅವಶ್ಯ ಭೂಮಿ ನೀಡಲು ಸರ್ಕಾರ ಬದಟಛಿವಾಗಿದೆ. ಭವಿಷ್ಯದಲ್ಲೂ ಇದೇ ರೀತಿಯ ಸಹಕಾರ ನೀಡಬೇಕು ಎಂದು ಪ್ರಧಾನಿಗೆ ಬರೆದ ಪತ್ರದಲ್ಲಿ ದೇಶಪಾಂಡೆ ಕೋರಿದ್ದಾರೆ.
ಐಐಟಿ, ಐಐಎಸ್‍ಸಿ, ಐಐಎಂ ಹಾಗೂ ಐಐಐಟಿ ಹೊಂದಿದ ಏಕೈಕ ರಾಜ್ಯವೆಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಲಿದೆ.
ದೇಶದ ಜ್ಞಾನ ನಗರಿ ಎಂಬ ಖ್ಯಾತಿ ಹೊಂದಿರುವ ಬೆಂಗಳೂರಿಗೆ ಐಐಟಿಯಿಂದ ಮತ್ತಷ್ಟು ಶೈಕ್ಷಣಿಕ ಲಾಭ ಸಿಗಲಿದೆ. ಸ್ಥಳೀಯ ಯುವಕರಿಗೆ ಉತ್ತಮ ಉದ್ಯೋಗ ನೀಡುವುದರ ಜತೆಗೆ ಮಾನವ ಸಂಪನ್ಮೂಲ ಅಭಿವೃದ್ಧಿಯಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಹಂಪಿ ರಕ್ಷಣೆ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿಗೆ ಕೇಂದ್ರದ ಈ ನೆರವು ಅಗತ್ಯವಾಗಿತ್ತು. ಹಂಪಿಯ ಮೂಲಸೌಕರ್ಯ ಅಭಿವೃದ್ಧಿಗೆ ಈ ಯೋಜನೆ ಲಾಭ ಕೊಡಲಿದೆ. ವಿದೇಶಿ ಪ್ರವಾಸಿಗರನ್ನು ಆಕರ್ಷಿಸುತ್ತಿರುವ ವಿಶ್ವ ಪಾರಂಪರಿಕ ತಾಣವು, ಪ್ರವಾಸೋದ್ಯಮ ಅಭಿವೃದ್ಧಿಯಿಂದ ಸ್ಥಳೀಯರಿಗೆ ಇನ್ನಷ್ಟು ಉದ್ಯೋಗಾವಕಾಶ ನೀಡಲಿದೆ ಎಂದು ವಿವರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

