ಜಿಂದಾಲ್ ಚಿಕಿತ್ಸಾ ಕೇಂದ್ರದಲ್ಲಿರುವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಚಿಕಿತ್ಸೆ ಪಡೆಯುತ್ತಿರುವ ಚಿಂದಾಲ್ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿರುವ...

ಬೆಂಗಳೂರು: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಚಿಕಿತ್ಸೆ ಪಡೆಯುತ್ತಿರುವ ಚಿಂದಾಲ್ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಕೂಲಿ ಕಾರ್ಮಿಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಚಿಕ್ಕಮಗಳೂರು ಮೂಲದ ರವಿ(36) ಮೃತರು. ಕೌಟುಂಬಿಕ ಕಲಹ ಕಾರಣಗಳಿಂದ ಚಿಕ್ಕ ಬಿದರಕಲ್ಲಿನಲ್ಲಿ ವಾಸವಿರುವ ಸಂಬಂಧಿ ಶಿವಣ್ಣ ಎಂಬುವರ ಮನೆಗೆ ವಾರದ ಹಿಂದಷ್ಟೇ ರವಿ ಆಗಮಿಸಿದ್ದರು. ಶಿವಣ್ಣ ಅವರು ಬಾರ್ ಬೆಂಡಿಂಗ್ ಕೆಲಸ ಮಾಡುತ್ತಿದ್ದು, ರವಿಗೆ ಜಿಂದಾಲ್‌ನಲ್ಲಿಯೇ ಕೆಲಸಕೊಡಿಸಿದ್ದರು.
ಬುಧವಾರ ಎಂದಿನಂತೆ ಇಬ್ಬರೂ ಕೆಲಸಕ್ಕೆ ತೆರಳಿದ್ದರು. ಸಂಜೆ ಕೆಲಸ ಮುಗಿಸಿಕೊಂಡು ಶಿವಣ್ಣ ಮನೆಗೆ ಹೋಗಿದ್ದು, ರವಿ ಬಂದಿರಲಿಲ್ಲ. ಬೇಸರದಲ್ಲಿದ್ದ ಕಾರಣ ಮನೆಗೆ ಬರಬಹುದು ಎಂದು ಸುಮ್ಮನಾಗಿದ್ದೆ. ಆದರೆ, ಗುರುವಾರ ಬೆಳಗ್ಗೆ ಪೊಲೀಸರು ತಿಳಿಸಿದ ನಂತರವೇ ರವಿ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ ಎಂದು ಶಿವಣ್ಣ ಪೊಲೀಸರಿಗೆ ತಿಳಿಸಿದ್ದಾರೆ. ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


