ಚಿತ್ರನಟ ರಮೇಶ್ ಭಟ್ ಕಾರು ಅಪಘಾತ
ಕನ್ನಡದ ಹಿರಿಯ ಚಿತ್ರನಟ ರಮೇಶ್ ಭಟ್ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆ ಭಾನುವಾರ ರಾಮನಗರದಲ್ಲಿ ನಡೆದಿದೆ...

ಬೆಂಗಳೂರು: ಕನ್ನಡದ ಹಿರಿಯ ಚಿತ್ರನಟ ರಮೇಶ್ ಭಟ್ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆ ಭಾನುವಾರ ರಾಮನಗರದಲ್ಲಿ ನಡೆದಿದೆ.
ಸೋಮೇಶ್ವರಕ್ಕೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಅವಘಾತವಾಗಿದ್ದು, ರಮೇಶ್ ಭಟ್ ಅವರಿಗೆ ಯಾವುದೇ ಅಪಾಯವಾಗಿಲ್ಲ ಎಂದು ಮೂಲಗಳು ತಿಳಿಸಿವೆ.
ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದಲ್ಲಿ ಇಂದು ಬೆಳಿಗ್ಗೆ ರಮೇಶ್ ಭಟ್ ಕಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ರಮೇಶ್ ಅವರು ಕಾರಿನಲ್ಲಿ ಬೆಂಗಳೂರಿನಿಂದ ಮಾಗಡಿಗೆ ಚಿತ್ರೀಕರಣಕ್ಕೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.
ಇದರಿಂದ ರಮೇಶ್ ಭಟ್ ಹಾಗೂ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ನಂತರ "ವೀರ ಮಡಿವಾಳ ಮಾಚಯ್ಯ" ಚಿತ್ರೀಕರಣಕ್ಕೆ ಭಾಗಿಯಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


