ವಕೀಲರಿಂದ ಮಾರ್ಚ್ 16ರಂದು ಕಲಾಪ ಬಹಿಷ್ಕಾರ
ರಾಜ್ಯದ ಎಲ್ಲ ನ್ಯಾಯಾಲಯಗಳ ವಕೀಲರು ಮಾ.16ರಂದು ಕಲಾಪಗಳಿದಂ ಹೊರಗುಳಿಯುವಂತೆ ಬೆಂಗಳೂರು ವಕೀಲರ ಸಂಘ ಮನವಿ ಮಾಡಿದೆ...

ಬೆಂಗಳೂರು: ರಾಜ್ಯದ ಎಲ್ಲ ನ್ಯಾಯಾಲಯಗಳ ವಕೀಲರು ಮಾ.16ರಂದು ಕಲಾಪಗಳಿದಂ ಹೊರಗುಳಿಯುವಂತೆ ಬೆಂಗಳೂರು ವಕೀಲರ ಸಂಘ ಮನವಿ ಮಾಡಿದೆ.
ಮಾ.11ರಂದು ಅಲಹಾಬಾದ್ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಪೊಲೀಸರು ವಕೀಲರೊಬ್ಬರನ್ನು ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ಈ ಘಟನೆಯನ್ನು ಖಂಡಿಸಿ ನ್ಯಾಯಾಲಯದ ಕಲಾಪ ಬಹಿಷ್ಕರಿಸಲಾಗುವುದು.
ಇದಕ್ಕೆ ವಕೀಲರು ಮಾತ್ರವಲ್ಲದೆ ಕಕ್ಷಿದಾರರೂ ಸಹಕರಿಸಬೇಕು ಎಂದು ಸಂಘದ ಅಧ್ಯಕ್ಷ ಎಚ್.ಸಿ ಶಿವರಾಮು ಶನಿವಾರ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದ್ದರು.
ವಕೀಲರ ಮೇಲೆ ನಡೆದ ಹಲ್ಲೆ ಹಿನ್ನೆಲೆಯಲ್ಲಿ ಸಂಘವು ಕಾರ್ಯಕಾರಿ ಸಮಿತಿಯು ತುರ್ತು ಸಭೆ ನಡೆಸಿದ್ದು, ಈ ಸಭೆಯಲ್ಲಿ ಕಲಾಪ ಬಹಿಷ್ಕಾರದ ನಿರ್ಣಯ ತೆಗೆದುಕೊಳ್ಳಲಾಗಿದೆ.
ಈ ಬಗ್ಗೆ ವಕೀಲರು ಈಗಾಗಲೇ ತಮ್ಮ ಕಕ್ಷಿದಾರರಿಗೆ ತಿಳಿಸಿದ್ದಾರೆ ಎಂದ ಅವರು, ರಾಜ್ಯದ ಎಲ್ಲ ತಾಲೂಕು, ಜಿಲ್ಲಾ ಮಟ್ಟದ ವಕೀಲರು ಇದಕ್ಕೆ ಸಹಕರಿಸಬೇಕೆಂದು ಮನವಿ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


