ಜಿಲ್ಲಾ ಸುದ್ದಿ

ಶಿಕಾರಿಗೆ ಹೋಗಿದ್ದ ವ್ಯಕ್ತಿಗೆ ಗುಂಡೇಟು ತಗುಲಿ ಸಾವು

ಶಿಕಾರಿಗೆ ಹೋಗಿದ್ದ ಮೂವರು ಸ್ನೇಹಿತರಲ್ಲಿ ಒಬ್ಬ ಆಕಸ್ಮಿಕವಾಗಿ ಗುಂಡು ತಗುಲಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ...

ಶಿಕಾರಿಗೆ ಹೋಗಿದ್ದ ವ್ಯಕ್ತಿಗೆ ಗುಂಡೇಟು ತಗುಲಿ ಸಾವು
ಸಾಂದರ್ಭಿಕ ಚಿತ್ರ
Published On :

ಚಿಕ್ಕಮಗಳೂರು: ಶಿಕಾರಿಗೆ ಹೋಗಿದ್ದ ಮೂವರು ಸ್ನೇಹಿತರಲ್ಲಿ ಒಬ್ಬ ಆಕಸ್ಮಿಕವಾಗಿ ಗುಂಡು ತಗುಲಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಹರೀಶ್ , ಮಾಧವ, ಹಾಗೂ ಮಂಜುನಾಥ ಎಂಬುವವರು ಚಿಕ್ಕಮಗಳೂರಿನ ಗುತ್ತೇಹಳ್ಳಿಯವರಾಗಿದ್ದು ನಿನ್ನೆ ತಡರಾತ್ರಿ ಊರವರ ಮಾತನ್ನು ಧಿಕ್ಕರಿಸಿ ಬೇಟೆಗೆ ತೆರಳಿದ್ದರು.

ಈ ವೇಳೆ ಹರೀಶ್ ಕೈಯಲ್ಲಿದ್ದ ಸಿಂಗಲ್ ಬ್ಯಾರಲ್ ಗನ್ ನಿಂದ ಆಕಸ್ಮಿಕವಾಗಿ ಗುಂಡು ಹಾರುವ ಮೂಲಕ ಮಾಧವ ಎಂಬುವವನು ಮೃತಪಟ್ಟಿದ್ದಾನೆ.

ಮಾಧವನ ಕಾಲಿಗೆ ಗುಂಡು ತಗುಲಿ ಅತಿಯಾದ ರಕ್ತಸ್ರಾವವಾಗಿದೆ. ಹೆದರಿದ ಹರೀಶ್ ಹಾಗೂ ಮಂಜುನಾಥ್ ಊರಿಗೆ ಬಂದು ವಿಷಯ ತಿಳಿಸಿದ್ದಾರೆ. ಊರಿನವರು ಹೋಗುವಷ್ಟರಲ್ಲಿ ಮಾಧವ ಕೊನೆಯುಸಿರೆಳೆದಿದ್ದರು ಎಂದು ಮೂಲಗಳು ತಿಳಿಸಿವೆ.

ಸ್ಥಳೀಯ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಹರೀಶ್ ನನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಮಂಜುನಾಥ ಪರಾರಿಯಾಗಿದ್ದು ಆತನನ್ನು ಹುಡುಕುತ್ತಿದ್ದಾರೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.