ಡಿಕೆ ರವಿ ಸಾವಿಗೆ ನೊಂದು ಆತ್ಮಹತ್ಯೆ ಮಾಡಿಕೊಂಡ ಅಭಿಮಾನಿ
ದಕ್ಷ ಐಎಎಸ್ ಅಧಿಕಾರಿ ಡಿ.ಕೆ. ರವಿಯವರ ನಿಗೂಢ ಸಾವಿನಿಂದ ಮನನೊಂದು ಅವರ ಅಭಿಮಾನಿಯೊಬ್ಬ ಮನೆಯಲ್ಲೇ ನೇಣಿಗೆ ಶರಣಾಗಿದ್ದಾನೆ.

ಕೋಲಾರ: ದಕ್ಷ ಐಎಎಸ್ ಅಧಿಕಾರಿ ಡಿ.ಕೆ. ರವಿಯವರ ನಿಗೂಢ ಸಾವಿನಿಂದ ಮನನೊಂದು ಅವರ ಅಭಿಮಾನಿಯೊಬ್ಬ ಮನೆಯಲ್ಲೇ ನೇಣಿಗೆ ಶರಣಾಗಿದ್ದಾನೆ.
ಕೋಲಾರದ ತಿರುಮಣಹಳ್ಳಿಯ ನಿವಾಸಿ 40 ವರ್ಷದ ಗೋಪಾಲ್ ಆತ್ಮಹತ್ಯೆಗೆ ಶರಣಾದ ಅಭಿಮಾನಿ. ಗೋಪಾಲ್ ಹಲವಾರು ವರ್ಷಗಳಿಂದ ಜಮೀನು ವಿವಾದವನ್ನು ಎದುರಿಸುತ್ತಿದ್ದರು ಎನ್ನಲಾಗಿದೆ. ಡಿ.ಕೆ. ರವಿಯವರು ಕೋಲಾರಕ್ಕೆ ಜಿಲ್ಲಾಧಿಕಾರಿಯಾಗಿ ಬಂದ ಬಳಿಕ ಗೋಪಾಲ್ ಅವರ ಸಮಸ್ಯೆ ಬಗೆಹರಿದಿತ್ತು.
ರವಿಯವರು ಅಕಾಲಿಕ ಮರಣದ ಸುದ್ದಿ ಮಾಧ್ಯಮಗಳಲ್ಲಿ ಬಿತ್ತರಗೊಳ್ಳುತ್ತಿದಂತೆ ಗೋಪಾಲ್ ಖಿನ್ನತೆಗೊಳಗಾಗಿದ್ದರು. ಡಿ.ಕೆ ರವಿಯವರ ಫ್ಲೆಕ್ಸ್ ಮಾಡಿಸಿಕೊಂಡು ಊರಲ್ಲಿ ಅದನ್ನು ನೇತು ಹಾಕಿ ಅದಕ್ಕೆ ಹಾರ ಹಾಕಿ ಮನೆಗೆ ಬಂದಿದ್ದರು. ಪತ್ನಿ ಹಾಗೂ ಮಕ್ಕಳು ಮನೆಯಿಂದ ಹೊರ ಹೋದ ಸಂದರ್ಭದಲ್ಲಿ ಅವರು ನೇಣು ಹಾಕಿಕೊಂಡು ಸಾವಿಗೆ ಶರಣಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


