ಸರ್ಕಾರಿ ಗೌರವಗಳೊಂದಿಗೆ ಡಿಕೆ ರವಿ ಅಂತ್ಯಸಂಸ್ಕಾರ
ದಕ್ಷ ಐಎಎಸ್ ಅಧಿಕಾರಿ ಡಿ.ಕೆ ರವಿ ಅವರ ಅಂತ್ಯಸಂಸ್ಕಾರ ಅವರ ಹುಟ್ಟೂರಾದ ದೊಡ್ಡಕೊಪ್ಪಲು ಗ್ರಾಮದಲ್ಲಿ ನಡೆಯಿತು. ಸಕಲ ಸರ್ಕಾರಿ ಗೌರವಗಳೊಂದಿಗೆ ರವಿ ಅವರ ಪಾರ್ಥಿವ ಶರೀರವನ್ನು ಮಣ್ಣು ಮಾಡಲಾಯಿತು.
ತುಮಕೂರು: ದಕ್ಷ ಐಎಎಸ್ ಅಧಿಕಾರಿ ಡಿ.ಕೆ ರವಿ ಅವರ ಅಂತ್ಯಸಂಸ್ಕಾರ ಅವರ ಹುಟ್ಟೂರಾದ ದೊಡ್ಡಕೊಪ್ಪಲು ಗ್ರಾಮದಲ್ಲಿ ನಡೆಯಿತು. ಸಕಲ ಸರ್ಕಾರಿ ಗೌರವಗಳೊಂದಿಗೆ ರವಿ ಅವರ ಪಾರ್ಥಿವ ಶರೀರವನ್ನು ಮಣ್ಣು ಮಾಡಲಾಯಿತು.
ಬೆಂಗಳೂರಿನಿಂದ ವಿಶೇಷ ಅಂಬುಲೆನ್ಸ್ ನಲ್ಲಿ ಡಿ.ಕೆ. ರವಿಯವರ ಪಾರ್ಥಿವ ಶರೀರವನ್ನು ದೊಡ್ಡಕೊಪ್ಪಲು ಗ್ರಾಮಕ್ಕೆ ತರಲಾಗಿದ್ದು, ದಾರಿಯುದ್ದಕ್ಕೂ ನೆರೆದಿದ್ದ ಜನತೆ ದಕ್ಷ ಅಧಿಕಾರಿ ರವಿಯವರಿಗೆ ತಮ್ಮ ಅಂತಿಮ ನಮನ ಸಲ್ಲಿಸಿದರು.
ರವಿಯವರ ಪಾರ್ಥಿವ ಶರೀರವಿದ್ದ ವಾಹನ ಹುಲಿಯೂರು ದುರ್ಗ ಪ್ರವೇಶಿಸುತ್ತಿದ್ದಂತೆಯೇ ಸಂಬಂಧಿಗಳ ಆಕ್ರಂದನ ಮುಗಿಲು ಮುಟ್ಟಿದೆ. ರವಿಯವರ ಸ್ವಂತ ಜಮೀನಿನಲ್ಲಿ ಅವರ ಅಣ್ಣನ ಮಗ ಅಂತ್ಯ ಸಂಸ್ಕಾರದ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

