ಅಂಗನವಾಡಿ ಕಾರ್ಯಕರ್ತೆಯರ ನಿರಶನ
ನಾನಾ ಬೇಡಿಕೆ ಈಡೇರಿಸುವಂತೆ ಕಳೆದ ಎರಡು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮಂಗಳವಾರದಿಂದ ಅಮರಣಾಂತ ನಿರಶನ ಹಮ್ಮಿಕೊಂಡಿದ್ದಾರೆ...

ಬೆಂಗಳೂರು: ನಾನಾ ಬೇಡಿಕೆ ಈಡೇರಿಸುವಂತೆ ಕಳೆದ ಎರಡು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮಂಗಳವಾರದಿಂದ ಅಮರಣಾಂತ ನಿರಶನ ಹಮ್ಮಿಕೊಂಡಿದ್ದಾರೆ.
ಬೇಡಿಕೆ ಈಡೇರಿಸುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಫಲರಾಗಿದ್ದು, ಕೊಟ್ಟ ಮಾತಿಗೆ ತಪ್ಪಿದ್ದಾರೆ. ಹಾಗಾಗಿ ನಿರಶನ, ಅಹೋರಾತ್ರಿ ಧರಣಿ ಹಮ್ಮಿಕೊಳ್ಳಲಾಗಿದ್ದು, ಬೇಡಿಕೆ ಈಡೇರಿಸುವವರೆಗೂ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.
ಸಿಐಟಿಯು ಅಧ್ಯಕ್ಷೆ ಎಸ್.ವರಲಕ್ಷ್ಮಿ ಮಾತನಾಡಿ, ಈ ಹಿಂದೆ ಫೆಬ್ರವರಿ ತಿಂಗಳಲ್ಲಿ ಬೇಡಿಕೆ ಈಡೇರಿಕೆಗಾಗಿ ಪ್ರತಿಭಟನೆ ನಡೆಸಿದಾಗ ಮುಖ್ಯಮಂತ್ರಿ ಕಾರ್ಯಕರ್ತೆಯರ ಗೌರವ ಧನ ಹೆಚ್ಚಿಸುವ ಹಾಗೂ ಉಳಿದ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದರು. ಭರವಸೆ ಉಳಿಸಿಕೊಳ್ಳುವಲ್ಲಿ ಸಿಎಂ ವಿಫಲರಾಗಿದ್ದಾರೆ.ಇದರಿಂದ ಕಾರ್ಯ ಕರ್ತೆಯರಿಗೆ ಸಾಕಷ್ಟು ತೊಂದರೆಯಾಗಿದೆ. ಈ ಹಿನ್ನೆಲೆ ಯಲ್ಲಿ ಮತ್ತೆ ಪ್ರತಿಭಟನೆ ಆರಂಭಿಸಲಾಗಿದೆ.
ನ್ಯಾಯ ಸಿಗುವವರೆಗೂ ಪ್ರತಿಭಟನೆ ಕೈಬಿಡುವುದಿಲ್ಲ. ಎರಡು ದಿನ ಪ್ರತಿಭಟನೆ ನಡೆಸಿದರೂ ಸಂಬಂಧಪಟ್ಟ ಅಧಿಕಾರಿಗಳು ತಮ್ಮ ಸಮಸ್ಯೆ ಆಲಿಸಿಲ್ಲ. ಹಾಗಾಗಿ ಆಮರಣಾಂತ ನಿರಶನ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಪ್ರತಿಭಟನೆಯಲ್ಲಿ 23 ಮಂದಿ ನಿರಶನ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


