ಜಿಲ್ಲಾ ಸುದ್ದಿ

ಮಾರ್ಚ್ 28 ರಂದು ಕರ್ನಾಟಕ ಬಂದ್‌

ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಒತ್ತಾಯಿಸಿ ಕನ್ನಡ ಪರ ಸಂಘಟನೆಗಳು...

ಮಾರ್ಚ್ 28 ರಂದು ಕರ್ನಾಟಕ ಬಂದ್‌
ವಾಟಾಳ್ ನಾಗರಾಜ್ (ಸಂಗ್ರಹ ಚಿತ್ರ)
Published On :

ಬೆಂಗಳೂರು: ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಒತ್ತಾಯಿಸಿ ಕನ್ನಡ ಪರ ಸಂಘಟನೆಗಳು ಶುಕ್ರವಾರ ಮಾರ್ಚ್ 28ರಂದು ಕರ್ನಾಟಕ ಬಂದ್ ಗೆ ಕರೆ ನೀಡಿವೆ.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು, ಮಾರ್ಚ್ 28ರಂದು ಕನ್ನಡ ಪರ ಸಂಘಟನೆಗಳು ಒಟ್ಟಾಗಿ ಬಂದ್ ನಡೆಸಲು ನಿರ್ಧರಿಸಿವೆ ಎಂದು ಹೇಳಿದರು. ಐಎಎಸ್ ಅಧಿಕಾರಿ ಡಿಕೆ ರವಿ ಅವರ ನಿಗೂಢ ಸಾವು ಪ್ರಕರಣವನ್ನು ರಾಜ್ಯಸರ್ಕಾರ ಸಿಬಿಐ ಒಪ್ಪಿಸಲು ಹಿಂದೇಟು ಹಾಕುತ್ತಿರುವುದರಿಂದ ಈ ಬಂದ್ ಮೂಲಕ ನಮ್ಮ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ವಾಟಾಳ್ ನಾಗರಾಜ್ ಹೇಳಿದರು. ಶಇದೇ ವೇಳೆ ನಿವಾರ ಬೆಳಗ್ಗೆ ಬೆಂಗಳೂರಿನ ಟೌನ್ ಹಾಲ್ ನಿಂದ ಫ್ರೀಡಂ ಪಾರ್ಕ್ ತನಕ ಮೌನ ಮೆರವಣಿಗೆ ನಡೆಸಲಾಗುವುದು ಎಂದು ವಾಟಾಳ್ ಮಾಹಿತಿ ನೀಡಿದರು.

ಮಾ.28ರ ಬೆಳಗ್ಗೆಯಿಂದ ಸಂಜೆ ತನಕ ಸಂಪೂರ್ಣ ಬಂದ್ ಆಚರಿಸಬೇಕು. ಬಂದ್ ವೇಳೆ ಎಲ್ಲಿಯೂ ಗಲಾಟೆ ನಡೆಸಬಾರದು ಎಂದು ಈ ಸಂದರ್ಭದಲ್ಲಿ ವಾಟಾಳ್ ನಾಗರಾಜ್ ಮನವಿ ಮಾಡಿಕೊಂಡರು. ಸುದ್ದಿಗೋಷ್ಠಿ ವೇಳೆ ಸಾರಾಗೋವಿಂದು ಅವರು ಕೂಡ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.