ಡಿಕೆ ರವಿ ನಿಗೂಢ ಸಾವು ಪ್ರಕರಣ: ಯಾರನ್ನೂ ರಕ್ಷಿಸುವುದಿಲ್ಲ ಎಂದ ಸಿದ್ದರಾಮಯ್ಯ
ದಕ್ಷ ಐಎಎಸ್ ಅಧಿಕಾರಿ ಡಿ.ಕೆ. ರವಿ ಅವರ ಸಾವಿಗೆ ಸಂಬಂಧಿಸಿದಂತೆ ಯಾವುದೇ ಸಂಗತಿಗಳನ್ನು ಮುಚ್ಚಿಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ಬೆಂಗಳೂರು: ದಕ್ಷ ಐಎಎಸ್ ಅಧಿಕಾರಿ ಡಿ.ಕೆ. ರವಿ ಅವರ ಸಾವಿಗೆ ಸಂಬಂಧಿಸಿದಂತೆ ಯಾವುದೇ ಸಂಗತಿಗಳನ್ನು ಮುಚ್ಚಿಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದು, ಈ ಸಾವಿನ ಹಿಂದೆ ಯಾರದಾದರೂ ಕೈವಾಡವಿದ್ದರೆ ಅವರನ್ನೂ ರಕ್ಷಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸೋಮವಾರ ಸದನದಲ್ಲಿ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಸರಕಾರದ ನಿಲುವೇನೆಂಬುದನ್ನು ಸ್ಪಷ್ಟಪಡಿಸುವುದಾಗಿ ಅವರು ಮಾಧ್ಯಮಕ್ಕೆ ತಿಳಿಸಿದರು. ರವಿ ಸಾವಿನ ಪ್ರಕರಣವನ್ನು ಸಿಐಡಿ ಬದಲು ಸಿಬಿಐಗೆ ವಹಿಸಬೇಕೆಂದು ವಿರೋಧ ಪಕ್ಷ ಮತ್ತು ಸಾರ್ವಜನಿಕರಿಂದ ಒತ್ತಡ ಬರುತ್ತಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಲೇಬೇಕಾಗಿದೆ.
ಕಡೆಗೂ ಬಾಯಿಬಿಟ್ಟ ಸಿದ್ದು ಕೋಲಾರದ ಡಿಸಿಯಾಗಿದ್ದಾಗ ಡಿಕೆ ರವಿ ಭೂಗಳ್ಳರಿಗೆ ಸಿಂಹಸ್ವಪ್ನವಾಗಿದ್ದರು. ಕೆಲ ರಾಜಕಾರಣಿಗಳಿಂದ ಡಿಕೆ ರವಿಯವರಿಗೆ ಬೆದರಿಕೆಯ ಕರೆಗಳೂ ಬಂದಿದ್ದವು. ಈ ಹಿನ್ನೆಲೆಯಲ್ಲಿ ಕೋಲಾರದಿಂದ ಬೆಂಗಳೂರಿಗೆ ಅವರನ್ನು ಟ್ರಾನ್ಸ್‌ಫರ್ ಮಾಡಲಾಗಿತ್ತು. ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಕೂಡ ತೆರಿಗೆಗಳ್ಳರ ವಿರುದ್ಧ ರವಿ ತಿರುಗಿಬಿದ್ದಿದ್ದರು. ಅವರಿಂದ ಕೊಲೆ ಬೆದರಿಕೆ ಕರೆ ಬಂದಿದ್ದರಿಂದ ರವಿಯವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


