ಆದಿಚುಂಚನಗಿರಿ ಮಠದಿಂದ ಡಿ.ಕೆ.ರವಿ ಅಣ್ಣನ ಪುತ್ರನ ದತ್ತು
ಕಳೆದ ಸೋಮವಾರ ನಿಗೂಢವಾಗಿ ಸಾವಿಗೀಡಾದ ಐಎಎಸ್ ಅಧಿಕಾರಿ ಡಿಕೆ ರವಿ ಅವರ ಸಹೋದರ ಡಿಕೆ.ರಮೇಶ್‌ರವರ ಪುತ್ರ ರೋಹನ್ ಗೌಡ...

ಬೆಂಗಳೂರು: ಕಳೆದ ಸೋಮವಾರ ನಿಗೂಢವಾಗಿ ಸಾವಿಗೀಡಾದ ಐಎಎಸ್ ಅಧಿಕಾರಿ ಡಿಕೆ ರವಿ ಅವರ ಸಹೋದರ ಡಿಕೆ.ರಮೇಶ್‌ರವರ ಪುತ್ರ ರೋಹನ್ ಗೌಡ ಅವರನ್ನು ಆದಿಚುಂಚನಗಿರಿ ಮಠ ದತ್ತು ಪಡೆದುಕೊಂಡಿದೆ.
ಚುಂಚಶ್ರೀ ಬಳಗದ ವತಿಯಿಂದ ಸೋಮವಾರ ನಡೆದ ಡಾ.ರವಿ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಅದಿಚುಂಚನಗಿರಿ ಮಠಾಧ್ಯಕ್ಷ ನಿರ್ಮಲಾನಂದ ಶ್ರೀಗಳು ಈ ವಿಚಾರವನ್ನು ಮಾಧ್ಯಮಗಳಿಗೆ ತಿಳಿಸಿದರು. ಈ ವೇಳೆ ಮಾತನಾಡಿದ ಅವರು, ರವಿಯವರ ಸ್ಥಾನವನ್ನು ತುಂಬಲು ಶ್ರೀ ಮಠ ತಕ್ಷಣದಿಂದಲೇ ಕಾರ್ಯಪ್ರವೃತ್ತ ವಾಗಲಿದ್ದು, ಅವರ ಅಣ್ಣ ಡಿ.ಕೆ.ರಮೇಶ್‌ರವರ ಮಗನ ಸಂಪೂರ್ಣ ಜವಾಬ್ದಾರಿಯನ್ನು ಹೊತ್ತುಕೊಳ್ಳಲಿದೆ. ಶಿಕ್ಷಣ ಮಾತ್ರವಲ್ಲದೆ ಅದರ ಜೊತೆಗೆ ಎಲ್ಲಾ ರೀತಿಯ ನೆರವು ನೀಡಲಿದೆ ಎಂದು ಶ್ರೀಗಳು ತಿಳಿಸಿದರು. ರೋಹನ್ ಗೌಡ ವಿದ್ಯಾಭ್ಯಾಸದ ಸಂಪೂರ್ಣ ಹೊಣೆಯನ್ನು ಆದಿಚುಂಚನಗಿರಿ ಮಠವಹಿಸಿಕೊಳ್ಳಲಿದೆ. ಆತನನ್ನು ದತ್ತು ಪಡೆದು ಐಎಎಸ್ ಓದಿಸಿ ರವಿ ಅವರ ಮಟ್ಟಕ್ಕೆ ಏರಿಸುತ್ತೇವೆ ಎಂದು ಆದಿಚುಂಚನಗಿರಿ ಮಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ತಿಳಿಸಿದ್ದಾರೆ.
ಪ್ರಸ್ತುತ ಆತ ಓದುತ್ತಿರುವ ಶಿಕ್ಷಣ ಸಂಸ್ಥೆಯ ಬಗ್ಗೆ ಮಾಹಿತಿ ಕಲೆ ಹಾಕಿ ಆತನಿಗೆ ಉನ್ನತ ಶಿಕ್ಷಣ ಹಾಗೂ ಜ್ಞಾನ ವೃದ್ದಿಗೆ ವಿಶೇಷ ಒತ್ತು ನೀಡಲಾಗುವುದು. ಆತ ಬೆಳೆದು ಒಬ್ಬ ದಕ್ಷ ಐಎಎಸ್ ಅಧಿಕಾರಿಯಾಗಬೇಕು ಎಂಬುದು ನಮ್ಮಹಂಬಲವಾಗಿದ್ದು, ಅದೇ ರೀತಿ ಆತನನ್ನು ಈಗಿನಿಂದಲೇ ತಯಾರಿ ಮಾಡುವ ಜವಾಬ್ದಾರಿಯನ್ನು ಶ್ರೀಮಠ ವಹಿಸಿಕೊಳ್ಳಲಿದೆ ಎಂದು ನಿರ್ಮಲಾನಂದ ಶ್ರೀಗಳು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


