ರು.60 ಕೋಟಿ ಮೌಲ್ಯದ ಭೂ ಒತ್ತುವರಿ ತೆರವು
ಪಟ್ಟಾಭಿರಾಮನಗರದಲ್ಲಿ ಜಟ್ಟಿ ಸಂಘ ಒತ್ತುವರಿ ಮಾಡಿದ್ದ ರು.60 ಕೋಟಿ ಮೌಲ್ಯದ 35 ಸಾವಿರ ಚ.ಅಡಿ ಭೂಮಿಯನ್ನು ಬಿಬಿಎಂಪಿ ವಶಪಡಿಸಿಕೊಂಡಿದೆ...

ಬೆಂಗಳೂರು: ಪಟ್ಟಾಭಿರಾಮನಗರದಲ್ಲಿ ಜಟ್ಟಿ ಸಂಘ ಒತ್ತುವರಿ ಮಾಡಿದ್ದ ರು.60 ಕೋಟಿ ಮೌಲ್ಯದ 35 ಸಾವಿರ ಚ.ಅಡಿ ಭೂಮಿಯನ್ನು ಬಿಬಿಎಂಪಿ ವಶಪಡಿಸಿಕೊಂಡಿದೆ.
ಆಟದ ಮೈದಾನದಲ್ಲಿ ಅನಧಿಕೃತವಾಗಿ ಕಾಂಪೌಂಡ್ ಗೋಡೆ ನಿರ್ಮಿಸಿದ್ದ ಜಟ್ಟಿ ಸಂಘ, ಈ ಜಾಗದಲ್ಲಿ ವಾಚ್‍ಮೆನ್ ಶೆಡ್ ನಿರ್ಮಿಸಿಕೊಂಡಿದ್ದರು. ನ್ಯಾಯಾಲಯದ ಆದೇಶದಂತೆ ದಕ್ಷಿಣ ವಲಯದ ಜಂಟಿ ಆಯುಕ್ತ ಎ.ಬಿ.ಹೇಮಚಂದ್ರ ಅವರ ನೇತೃತ್ವದಲ್ಲಿ ಒತ್ತುವರಿ ತೆರವುಗೊಳಿಸಲಾಯಿತು. 1992ರಿಂದ ಈ ಜಾಗವನ್ನು ಆಟದ ಮೈದಾನವೆಂದು ಘೋಷಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಲಾಗಿತ್ತು. `ಜಟ್ಟಿ ಕಮ್ಯುನಿಟಿ ಟ್ರಸ್ಟ್ ' ಈ ಜಾಗದಲ್ಲಿ ಅನಧಿಕೃತವಾಗಿ ಶೆಡ್ ನಿರ್ಮಿಸಿ ಒತ್ತುವರಿ ಮಾಡಿಕೊಂಡಿತ್ತು.
ಈ ವಿವಾದ ನ್ಯಾಯಾಲಯದ ಮೇಟ್ಟಿಲೇರಿದ್ದು, ಬಿಬಿಎಂಪಿಗೆ ಸೇರಿದ ಜಾಗ ಎಂದು ತೀರ್ಪು ನೀಡಲಾಗಿತ್ತು. ಹಲವು ಬಾರಿ ನೋಟಿಸ್ ನೀಡಿದ್ದರೂ ತೆರವು ಮಾಡಲು ಸಂಘ ಮುಂದಾಗಿರಲಿಲ್ಲ. ಬೆಳಗ್ಗೆ 6 ಗಂಟೆಯಿಂದ ಆರಂಭವಾದ ಕಾರ್ಯಾಚರಣೆ ಮಧ್ಯಾಹ್ನದ ವೇಳೆಗೆ ಪೂರ್ಣಗೊಂಡಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


