ಮಹಿಳೆ ಅತ್ಯಾಚಾರ ಖಂಡಿಸಿ ಪ್ರತಿಭಟನೆ
ಅನ್ಯ ಕೋಮಿನ ಮಹಿಳೆ ಮೇಲೆ ಇಬ್ಬರು ಕಾಮುಕರು ಅತ್ಯಾಚಾರ ಎಸಗಿರುವ ಘಟನೆ ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯ ಅದರಂಗಿ ಗ್ರಾಮದಲ್ಲಿ ನಡೆದಿದೆ...

ರಾಮನಗರ/ಮಾಗಡಿ: ಅನ್ಯ ಕೋಮಿನ ಮಹಿಳೆ ಮೇಲೆ ಇಬ್ಬರು ಕಾಮುಕರು ಅತ್ಯಾಚಾರ ಎಸಗಿರುವ ಘಟನೆ ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯ ಅದರಂಗಿ ಗ್ರಾಮದಲ್ಲಿ ನಡೆದಿದೆ.
ಶನಿವಾರ ರಾತ್ರಿ 8ರ ಸಮಯದಲ್ಲಿ 23 ವರ್ಷದ ಯುವತಿ ಅದರಂಗಿಯಿಂದ ಕಾಗಿಮಡು ಗ್ರಾಮದಲ್ಲಿರುವ ಸಂಬಂಧಿಕರ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ದುರುಳರಿಬ್ಬರು ರಸ್ತೆ ಪಕ್ಕದಲ್ಲಿದ್ದ ಬಾಳೆ ತೋಟಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಿ ಪರಾರಿಯಾದರು. ಯುವತಿ ಚೇತರಿಸಿಕೊಂಡು ಗ್ರಾಮಸ್ಥರ ಸಹಾಯದಿಂದ ಮಾಗಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಪರೀಕ್ಷೆ ನಡೆಸಿದ ವೈದ್ಯರು ಅತ್ಯಾಚಾರ ನಡೆದಿರುವುದನ್ನು ದೃಢ ಪಡಿಸಿದ್ದಾರೆ. ಕುದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಯುವತಿ ದಾಖಲಾಗಿದ್ದ ಆಸ್ಪತ್ರೆ ಎದುರು ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ ಸಾರ್ವಜನಿಕರು ಅತ್ಯಾಚಾರಿಗಳನ್ನು ಕೂಡಲೇ ಬಂಧಿಸಿ, ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


