ಇಂದಿನಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ
ಎಸ್ಸೆಸ್ಸೆಲ್ಸಿ ಪರೀಕ್ಷೆ ಸೋಮವಾರದಿಂದ (ಮಾ.30) ಆರಂಭವಾಗುತ್ತಿದ್ದು, ಈ ಬಾರಿ 8,56,438 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. 829 ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಸಲಾಗಿದೆ...

ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆ ಸೋಮವಾರದಿಂದ (ಮಾ.30) ಆರಂಭವಾಗುತ್ತಿದ್ದು, ಈ ಬಾರಿ 8,56,438 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. 829 ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಸಲಾಗಿದೆ.
ಯಾವುದೇ ಅಹಿತಕರ ಘಟನೆ ಹಾಗೂ ಅಕ್ರಮ ಚಟುವಟಿಕೆಗಳು ನಡೆಯದಂತೆ ಪ್ರತಿ ಜಿಲ್ಲೆಗಳಲ್ಲೂ ವಿಚಕ್ಷಣ ದಳ ರಚಿಸಲಾಗಿದ್ದು, ರಾಜ್ಯದ ನಿರ್ದೇಶಕರು, ಸಹ ನಿರ್ದೇಶಕರು ಹಾಗೂ ಉಪನಿರ್ದೇಶಕರು ಈ ದಳದ ಜವಾಬ್ದಾರಿ ವಹಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆಯ ಎಲ್ಲ ತಾಲೂಕಿಗೆ ಡಯಟ್‍ನ ಇಬ್ಬರು ಹಿರಿಯ ಉಪನ್ಯಾಸಕರನ್ನು ವಿಚಕ್ಷಣಾ ದಳಕ್ಕೆ ನೇಮಿಸಲಾಗಿದೆ. ಈ ಜಾಗೃತ ದಳದಲ್ಲಿ ಶಿಕ್ಷಣಾಧಿಕಾರಿಗಳು ಇರುತ್ತಾರೆ. ಹಾಗೆಯೇ ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ನೇತೃತ್ವದಲ್ಲಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡುವರು. ಈ ಮೂಲಕ ಕಟ್ಟುನಿಟ್ಟಾಗಿ ಪರೀಕ್ಷೆ ನಡೆಸಲು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸಜ್ಜಾಗಿದೆ.
ಪರೀಕ್ಷೆಗೆ ಒಟ್ಟು 13,693 ಶಾಲೆಗಳು ನೋಂದಾಯಿಸಿದ್ದು, 3038 ಪರೀಕ್ಷಾ ಕೇಂದ್ರಗಳಿವೆ. ಇದರಲ್ಲಿ 148 ಸೂಕ್ಷ್ಮ, 50 ಅತಿಸೂಕ್ಷ್ಮಕೇಂದ್ರಗಳಾಗಿವೆ. ಇದರಲ್ಲಿ 70 ಕೇಂದ್ರಗಳು ಸಿಸಿಟಿವಿ ಹೊಂದಿವೆ. ಏ.13ಕ್ಕೆ ಪರೀಕ್ಷೆ ಅಂತ್ಯಗೊಳ್ಳಲಿದ್ದು, ಏ.19ರಿಂದ 211 ಕೇಂದ್ರದಲ್ಲಿ ಮೌಲ್ಯಮಾಪನ ನಡೆಯಲಿದೆ.
ಪರೀಕ್ಷಾ ಕೊಠಡಿಯಲ್ಲಿ ಮೊಬೈಲ್ ನಿಷಿದ್ಧ
ಪರೀಕ್ಷಾ ಕೇಂದ್ರದೊಳಕ್ಕೆ ವಿದ್ಯಾರ್ಥಿಗಳು ಮೊಬೈಲ್ ತರಬಾರದು ಎಂದು ನಿಯಮವಿದ್ದರೂ ಅದು ಕಟ್ಟುನಿಟ್ಟಾಗಿ ಜಾರಿಯಾಗುತ್ತಿರಲಿಲ್ಲ. ಆದರೆ ಈ ಬಾರಿ ಯಾವುದೇ ಸಡಿಲಿಕೆ ನೀಡಲಾಗುತ್ತಿಲ್ಲ. ಪರೀಕ್ಷಾ ಕೇಂದ್ರದ ಮೇಲ್ವಿಚಾರಕರೂ ಕೇಂದ್ರದೊಳಕ್ಕೆ ಮೊಬೈಲ್ ತಾರದಂತೆ ಕಟ್ಟಪ್ಪಣೆ ಮಾಡಲಾಗಿದೆ. ವಾಟ್ಸ್ ಅ್ಯಪ್, ಹೈಕ್ ಇತ್ಯಾದಿ ಮೂಲಕ ಪ್ರಶ್ನೆಪತ್ರಿಕೆ ಹಾಗೂ ಉತ್ತರಗಳನ್ನು ರವಾನಿಸುವ ಸಾಧ್ಯತೆ ಇರುವ ಕಾರಣ ಮೇಲ್ವಿಚಾರಕರು ಮೊಬೈಲ್ ಇಟ್ಟುಕೊಂಡಲ್ಲಿ ಕ್ರಮಕ್ಕೆ ಗುರಿಯಾಗಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


