ಆನೆ ದಂತ ವಿಗ್ರಹ ಮಾರಾಟ: ಇಬ್ಬರ ಸೆರೆ
ಆನೆ ದಂತದಿಂದ ತಯಾರಿಸಿದ ಬುದ್ಧನ ವಿಗ್ರಹಗಳ ಮಾರಾಟಕ್ಕೆ ಯತ್ನಿಸಿದ ಇಬ್ಬರನ್ನು ಬಂಧಿಸಿರುವ ವರ್ತೂರು ಪೊಲೀಸರು 2 ವಿಗ್ರಹ ಹಾಗೂ 1 ಪಚ್ಚೆಕಲ್ಲು ವಶಪಡಿಸಿಕೊಂಡಿದ್ದಾರೆ...

ಬೆಂಗಳೂರು: ಆನೆ ದಂತದಿಂದ ತಯಾರಿಸಿದ ಬುದ್ಧನ ವಿಗ್ರಹಗಳ ಮಾರಾಟಕ್ಕೆ ಯತ್ನಿಸಿದ ಇಬ್ಬರನ್ನು ಬಂಧಿಸಿರುವ ವರ್ತೂರು ಪೊಲೀಸರು 2 ವಿಗ್ರಹ ಹಾಗೂ 1 ಪಚ್ಚೆಕಲ್ಲು ವಶಪಡಿಸಿಕೊಂಡಿದ್ದಾರೆ.
ಕನಕಪುರದ ಮಹದೇವಪ್ರಸಾದ್(46), ಪ್ರಶಾಂತ್ ಕುಮಾರ್(27) ಬಂಧಿತರು. ಸರ್ಜಾಪುರ ಸಮೀಪದ ಮುತ್ತಾನಲ್ಲೂರು ಕ್ರಾಸ್‍ನಲ್ಲಿ ವಿಗ್ರಹ ಮಾರಾಟಕ್ಕೆ ಯತ್ನಿಸುತ್ತಿದ್ದಾಗ ಮಹಾದೇವಪ್ರಸಾದ್‍ನನ್ನು ಬಂಧಿಸಿದ್ದಾರೆ. ಆತ ನೀಡಿದ ಮಾಹಿತಿ ಮೇಲೆ ಪ್ರಶಾಂತ ಮನೆ ಮೇಲೆ ದಾಳಿ ನಡೆಸಿ ಮತ್ತೊಂದು ವಿಗ್ರಹ ಹಾಗೂ ಸೈಜ್‍ಕಲ್ಲಿನ ಗಾತ್ರದ ಪೆಚ್ಚಕಲ್ಲು ವಶಪಡಿಸಿಕೊಂಡಿದ್ದಾರೆ. ಕಳ್ಳ ಮಾರುಕಟ್ಟೆಯಲ್ಲಿ ಇವುಗಳ ಬೆಲೆ ಸುಮಾರು ರು.12ರಿಂದ ರು.13 ಲಕ್ಷ ಇದೆ ಎಂದು ಆಗ್ನೇಯ ಡಿಸಿಪಿ ರೋಹಿಣಿ ಕಟೋಚ್ ತಿಳಿಸಿದ್ದಾರೆ.
ಐಪಿಎಲ್ ಬೆಟ್ಟಿಂಗ್: ಬಂಧನ
ಬೆಂಗಳೂರು: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಇಬ್ಬರನ್ನು ಬಂಧಿಸಿ ರು.1.5 ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ. ಮೋಹನ್ ಕುಮಾರ್(38) ಹಾಗೂ ರಾಜು(34) ಬಂಧಿತರು. ಆರೋಪಿಗಳು ನಾಗರಬಾವಿ 12ನೇ ಬ್ಲಾಕ್‍ನಲ್ಲಿರುವ ಮನೆಯಲ್ಲಿ ಗುರುವಾರ(ಏ.30) ಕೊಲ್ಕತ್ತಾ ಹಾಗೂ ಚೆನ್ನೈ ನಡುವೆ ನಡುವಿನ ಪಂದ್ಯಕ್ಕೆ ಬೆಟ್ಟಿಂಗ್ ಕಟ್ಟಿಸಿಕೊಳ್ಳುತ್ತಿದ್ದರು. ರು.1.50 ಲಕ್ಷ ನಗದು, 8 ಮೊಬೈಲ್ ಫೋನ್‍ಗಳು, 1 ಲ್ಯಾಪ್‍ಟಾಪ್, 1 ಟಿವಿ ವಶಪಡಿಸಿಕೊಂಡಿದ್ದಾರೆ. ಜ್ಞಾನಭಾರತಿ ಠಾಣೆಯಲ್ಲಿಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


