ಜಿಲ್ಲಾ ಸುದ್ದಿ

ಅಂತ್ಯಕ್ರಿಯೆಗೆ ಹೋದವರು ಮಸಣ ಸೇರಿದ್ರು!

ಅಂತ್ಯಕ್ರಿಯೆ ಮುಗಿಸಿ ಗ್ರಾಮಕ್ಕೆ ವಾಪಸ್ಸಾಗುವ ಸಂದರ್ಭದಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ಐವರು ಮೃತಪಟ್ಟಿರುವ ದಾರುಣ ಘಟನೆ ಕಲಬುರಗಿ ಜಿಲ್ಲೆಯ ಸೇಡಂನಲ್ಲಿ ನಡೆದಿದೆ.

ಅಂತ್ಯಕ್ರಿಯೆಗೆ ಹೋದವರು ಮಸಣ ಸೇರಿದ್ರು!
ಟ್ರ್ಯಾಕ್ಟರ್ ಪಲ್ಟಿ(ಸಾಂದರ್ಭಿಕ ಚಿತ್ರ)
Published On :

ಕಲಬುರಗಿ: ಅಂತ್ಯಕ್ರಿಯೆ ಮುಗಿಸಿ ಗ್ರಾಮಕ್ಕೆ ವಾಪಸ್ಸಾಗುವ ಸಂದರ್ಭದಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ಐವರು ಮೃತಪಟ್ಟಿರುವ ದಾರುಣ ಘಟನೆ ಕಲಬುರಗಿ ಜಿಲ್ಲೆಯ ಸೇಡಂನಲ್ಲಿ ನಡೆದಿದೆ.

ಸಂಬಂಧಿಯೊಬ್ಬರ ಅಂತ್ಯಕ್ರಿಯೆಗಾಗಿ ಹಂದರಕಿ ಗ್ರಾಮಕ್ಕೆ ಸೇರಿದ್ದ ಸೇಡಂ ತಾಲೂಕಿನ ಗೌಡಹಳ್ಳಿ ಗ್ರಾಮದ ನಿವಾಸಿಗಳಾದ ಶಿವರಾಯ್(60), ಸಿದ್ದು ಹಡಪದ(35), ಭೀಮು ಬಡಗೇರ(30), ದೇವಿಂದ್ರಪ್ಪ ಬೆಳಗೆರೆ(60) ಹಾಗೂ ದೇವಪ್ಪ ಬೆಳಗೆರೆ(35) ಮೃತರ ದುರ್ದೈವಿಗಳು.

ಗೌಡಹಳ್ಳಿ ಗ್ರಾಮ ಸುಮಾರು 15 ಮಂದಿ ಹಂದರಕಿಯಲ್ಲಿ ಅಂತ್ಯಕ್ರಿಯೆಗಾಗಿ ಹೋಗಿದ್ದರು. ಅಂತ್ಯಕ್ರಿಯೆ ವಿಧಿವಿಧಾನಗಳನ್ನು ಪೂರೈಸಿ ಬಳಿಕ ಗ್ರಾಮಕ್ಕೆ ವಾಪಸ್ಸಾಗುವಾಗ ಚಾಲಕ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಪಿ ಹೊಡೆದಿದೆ. ಈ ವೇಳೆ ಈ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ, ಇನ್ನುಳಿದಂತೆ 10 ಮಂದಿಗೆ ಗಾಯಗಳಾಗಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸೇಡಂ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.