ಗ್ರಾಪಂ ಚುನಾವಣೆ ಎದುರಿಸಲು ಬಿಜೆಪಿ ಸಿದ್ಧ: ಶಾಸಕ ಸಿ.ಟಿ. ರವಿ
ಗ್ರಾಮ ಪಂಚಾಯಿತಿ ಚುನಾವಣೆ ಎದುರಿಸಲು ಬಿಜೆಪಿ ಸನ್ನದಟಛಿವಾಗಿದ್ದು, ರಾಜ್ಯ ಪ್ರವಾಸ ಕೈಗೊಂಡು ಪಕ್ಷ ಕಟ್ಟುವುದಕ್ಕೆ 30 ತಂಡಗಳ ಪಟ್ಟಿ ಸಿದ್ಧವಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿ.ಟಿ. ರವಿ ತಿಳಿಸಿದ್ದಾರೆ...

ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆ ಎದುರಿಸಲು ಬಿಜೆಪಿ ಸನ್ನದಟಛಿವಾಗಿದ್ದು, ರಾಜ್ಯ ಪ್ರವಾಸ ಕೈಗೊಂಡು ಪಕ್ಷ ಕಟ್ಟುವುದಕ್ಕೆ 30 ತಂಡಗಳ ಪಟ್ಟಿ ಸಿದ್ಧವಾಗಿದೆ ಎಂದು
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿ.ಟಿ. ರವಿ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಈಗಾಗಲೇ ಚುನಾವಣೆ ನಡೆಯ ಲಿರುವ 5,844 ಗ್ರಾಮ ಪಂಚಾಯ್ತಿಗಳಿಗೆ ತಲಾ ಒಬ್ಬರು ಪ್ರಭಾರಿ ಮತ್ತು ಸಹಪ್ರಭಾರಿ ನೇಮಕ ಮÁಡಲಾಗಿದೆ' ಎಂದರು.
ಪ್ರತಿ ವಿಧಾನಸಭಾ ಕ್ಷೇತ್ರದಿಂದ 4 ರಿಂದ 5 ಪ್ರಮುಖರನ್ನು ಕರೆಸಿ ವಿಧಾನಸಭಾ ಕ್ಷೇತ್ರ ಮಟ್ಟದಲ್ಲಿ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ. ಮೇ. 8 ರಿಂದ 15ರವರೆಗೆ ಸಮಾವೇಶ ನಡೆಸುತ್ತೇವೆ. ರಾಜ್ಯದಲ್ಲಿ ಹಿಂದೆ ಬಿಜೆಪಿ ಸರ್ಕಾರದ ಅಧಿಕಾರದಲ್ಲಿದ್ದಾಗ ಮಾಡಿ ಜನಪರ ಕಾರ್ಯಕ್ರಮಗಳು ಮತ್ತು ಈಗಿನ ಕೇಂದ್ರ ಸರ್ಕಾರದ ಯೋಜಗಳ ಬಗ್ಗೆ ಚರ್ಚೆ ನಡೆಸಲಾಗುವುದು. ಈ ಬಾರಿಯ ಗ್ರಾಮ ಪಂಜಾಯ್ತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಗ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯ್ಲಿಲ ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದರು.
ಮೀಸಲು ಪಟ್ಟಿ ಪ್ರಕಟಿಸಲಿ:
ಗ್ರಾಮ ಪಂಚಾಯ್ತಿಗಳಿಗೆ ಚುನಾವಣಾ ವೇಳಾ ಪಟ್ಟಿ ಘೋಷಣೆ ಆಗಿದ್ದರೂ, ರಾಜ್ಯ ಸರ್ಕಾರ ಮೀಸಲು ಪಟ್ಟಿ ಪ್ರಕಟಿಸಿಲ್ಲ. ಈ ಬಗ್ಗೆ ಸಾಕಷ್ಟು ಗೊಂದಲ ಇದೆ. ಹಾಗಾಗಿ ತಕ್ಷಣ ಮೀಸಲು ಪಟ್ಟಿ ಪ್ರಕಟಿಸಬೇಕು ಹಾಗೂ ಆಕ್ಷೇಪಣೆಗಳಿಗೆ ಕಾಲಾವಕಾಶ ನೀಡಬೇಕು ಎಂದು ಆಗ್ರಹಿಸಿದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


