ಜಿಲ್ಲಾ ಸುದ್ದಿ

ಇಂದ್ರಧನುಷ್ ಲಸಿಕೆ ಅಭಿಯಾನ ನಾಳೆಯಿಂದ

ಬಿಬಿಎಂಪಿ ವ್ಯಾಪ್ತಿಯ ಆಸ್ಪತ್ರೆ, ಔಷಧಾಲಯಗಳಲ್ಲಿ ಮೇ 8ರಿಂದ `ಇಂದ್ರಧನುಷ್ ಲಸಿಕೆ ಅಭಿಯಾನ' ನಡೆಯಲಿದೆ. ತಾಯಿ ಹಾಗೂ ಶಿಶುಮರಣ ಪ್ರಮಾಣ ಕಡಿಮೆ ಮಾಡಲು, ಗರ್ಭಿಣಿ ಹಾಗೂ 2 ವರ್ಷದೊಳಗಿನ..

ಇಂದ್ರಧನುಷ್ ಲಸಿಕೆ ಅಭಿಯಾನ ನಾಳೆಯಿಂದ
ಇಂದ್ರಧನುಷ್ ಲಸಿಕೆ
Published On :

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಆಸ್ಪತ್ರೆ, ಔಷಧಾಲಯಗಳಲ್ಲಿ ಮೇ 8ರಿಂದ `ಇಂದ್ರಧನುಷ್ ಲಸಿಕೆ ಅಭಿಯಾನ' ನಡೆಯಲಿದೆ. ತಾಯಿ ಹಾಗೂ ಶಿಶುಮರಣ ಪ್ರಮಾಣ ಕಡಿಮೆ ಮಾಡಲು, ಗರ್ಭಿಣಿ ಹಾಗೂ 2 ವರ್ಷದೊಳಗಿನ ಮಕ್ಕಳಿಗೆ 7 ದಿನಗಳ ಕಾಲ ನಡೆಯುವ ಅಭಿಯಾನದಲ್ಲಿ ನಾನಾ ರೋಗಗಳು ಬಾರದಂತೆ ಲಸಿಕೆ ನೀಡಲಾಗುತ್ತದೆ.

ಬೆಳಗ್ಗೆ 9ರಿಂದ ಸಂಜೆ 4ರವರೆಗೆ ಬಿಬಿಎಂಪಿ ವ್ಯಾಪ್ತಿಯ ರೆಫರಲ್ ಆಸ್ಪತ್ರೆ, ನಗರ ಕುಟುಂಬ ಕಲ್ಯಾಣ ಕೇಂದ್ರ, ಹೆರಿಗೆ ಆಸ್ಪತ್ರೆ ಹಾಗೂ ಔಷಧಾಲಯಗಳಲ್ಲಿ ಲಸಿಕೆ ದೊರೆಯುತ್ತದೆ. ನಗರದಲ್ಲಿ 4,659 ಲಸಿಕೆ ವಂಚಿತ ಮಕ್ಕಳು ಹಾಗೂ ಗರ್ಭಿಯರಿದ್ದು, ಬಿಬಿಎಂಪಿಯ 135 ವಾರ್ಡ್‍ಗಳ 369 ಸ್ಥಳಗಳಲ್ಲಿ ಲಸಿಕಾ ಕೇಂದ್ರಗಳನ್ನು ತೆರೆಯಲಾಗಿದೆ.

43 ಸಂಚಾರಿ ತಂಡ ರಚಿಸಲಾಗಿದೆ. ಬಡವರು, ಕೊಳೆಗೇರಿಗಳಲ್ಲಿ ವಾಸಿಸುವ ಮಕ್ಕಳು ಕಡ್ಡಾಯವಾಗಿ ಲಸಿಕೆ ಪಡೆಯುವಂತೆ ವ್ಯವಸ್ಥೆ ಮಾಡಲಾಗಿದೆ. ಕ್ಷಯ, ಧನುರ್ವಾಯು, ಗಂಟಲಮಾರಿ, ಪೋಲಿಯೋ, ಹಿಬ್, ದಡಾರ, ನಾಯಿಕೆಮ್ಮು ಸೇರಿದಂತೆ ಹಲವು ಕಾಯಿಲೆಗಳಿಗೆ ಲಸಿಕೆ ನೀಡಲಾಗುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.