ವಂಡರ್ ಲಾ ಆಡಳಿತ ಮಂಡಳಿ ವಿರುದ್ಧ ಕಾರ್ಮಿಕರಿಂದ ಪ್ರತಿಭಟನೆ
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ವಂಡರ್ ಲಾ ಆಡಳಿತ ಮಂಡಳಿ ವಿರುದ್ಧ ಕಾರ್ಮಿಕರು ಭಾನುವಾರ ಬೆಳಿಗ್ಗೆ 10 ಗಂಟೆಗೆ...

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ವಂಡರ್ ಲಾ ಆಡಳಿತ ಮಂಡಳಿ ವಿರುದ್ಧ ಕಾರ್ಮಿಕರು ಭಾನುವಾರ ಬೆಳಿಗ್ಗೆ 10 ಗಂಟೆಗೆ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಂಡರ್ ಲಾ ಸಂಘದ ಗಂಗಣ್ಣ, ವಂಡರ್ ಲಾ ಆಡಳಿತ ಮಂಡಳಿ ನಮ್ಮ ಮೇಲೆ ದಬ್ಬಾಳಿಕೆ ನಡೆಸುತ್ತಿದೆ. ಕಾರಣವಿಲ್ಲದೇ ಅನೇಕ ಕಾರ್ಮಿಕರನ್ನು ಅಮಾನತುಗೊಳಿಸುತ್ತಿದೆ. ಈ ಸಂಬಂಧ ಪೊಲೀಸರಲ್ಲಿ ದೂರು ನೀಡಲು ಹೋದರೆ ಅವರು ಕೂಡ ಆಡಳಿತ ಮಂಡಳಿ ಪರವಾಗಿ ನಿಂತಿದ್ದು, ನಮ್ಮ ಅಹವಾಲನ್ನು ಆಲಿಸುತ್ತಿಲ್ಲ ಎಂದು ಆಪಾದಿಸಿದರು.
ಈ ಹಿನ್ನಲೆಯಲ್ಲಿ ಆಡಳಿತ ಮಂಡಳಿ ವಿರುದ್ಧ ಭಾನುವಾರ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದು, ಬೆಂಗಳೂರು-ಮೈಸೂರು ಹೆದ್ದಾರಿಯ ವಂಡರ್ ಲಾ ಗೇಟ್ ನಿಂದ ವಂಡರ್ ಲಾ ಕಂಪನಿಯವರೆಗೆ ಮೆರವಣಿಗೆ ನಡೆಸಲಿದ್ದು, ಕಂಪನಿ ಎದುರು ಬಹಿರಂಗ ಸಭೆಯನ್ನು ಆಯೋಜಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


