ಜಿಲ್ಲಾ ಸುದ್ದಿ

ಆಗಸ್ಟ್ ಒಳಗಾಗಿ ಬಿಬಿಎಂಪಿ ಚುನಾವಣೆ: ರಾಮಲಿಂಗಾ ರೆಡ್ಡಿ

ಸುಪ್ರೀಂಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರ ಆಗಸ್ಟ್ ಮೊದಲ ವಾರದ ಒಳಗಾಗಿ ಬಿಬಿಎಂಪಿ ಚುನಾವಣೆ ನಡೆಸಲು ಸರ್ಕಾರ ಸಿದ್ಧವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ...

ಆಗಸ್ಟ್ ಒಳಗಾಗಿ ಬಿಬಿಎಂಪಿ ಚುನಾವಣೆ: ರಾಮಲಿಂಗಾ ರೆಡ್ಡಿ
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
Published On :

ಬೆಂಗಳೂರು: ಸುಪ್ರೀಂಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರ ಆಗಸ್ಟ್ ಮೊದಲ ವಾರದ ಒಳಗಾಗಿ ಬಿಬಿಎಂಪಿ ಚುನಾವಣೆ ನಡೆಸಲು ಸರ್ಕಾರ ಸಿದ್ಧವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಚುನಾವಣೆ ನಡೆಸುವಂತೆ ಕೋರ್ಟ್ ಆದೇಶಿಸಿರುವುದರಿಂದ ಸರ್ಕಾರ ಚುನಾವಣೆ ನಡೆಸಲು ಸಿದ್ಧವಿದೆ. ಇದರಲ್ಲಿ ಯಾವುದೇ ರೀತಿಯಲ್ಲೂ ವಿಳಂಬ ಮಾಡಲು ಸರ್ಕಾರ ಮುಂದಾಗುವುದಿಲ್ಲ. ಸುಪ್ರೀಂಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿಸುವ ವಿಚಾರ ನನಗೆ ಗೊತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರೆ ಅದು ನನಗೆ ಗೊತ್ತಿಲ್ಲ ಎಂದು ಸೋಮವಾರ ಸುದ್ದಿಗಾರರಿಗೆ ಹೇಳಿದರು.

ಬಿಬಿಎಂಪಿ ಚುನಾವಾಣೆಗೆ ಸಂಬಂಧಿಸಿದಂತೆ ವಾರ್ಡ್ ಮೀಸಲು ಪಟ್ಟಿ ಬಿಡಗಡೆ ಮಾಡುವುದು ನಗರಾಭಿವೃದ್ಧಿ ಇಲಾಖೆಗೆ ಬಿಟ್ಟ ವಿಚಾರ. ಇದರಲ್ಲಿ ನಮ್ಮದೇನೂ ಪಾತ್ರವಿಲ್ಲ. ಹಿಂದಿನ ಬಾರಿ ಬಿಡುಗಡೆ ಮಾಡಿದ್ದ ಪಟ್ಟಿಯಲ್ಲಿ ಕಾಂಗ್ರೆಸ್‍ನ 65 ಕಾರ್ಪೋರೇಟರ್‍ಗಳಲ್ಲಿ 39 ಸದಸ್ಯರಿಗೆ ಸ್ಪರ್ಧಿಸುವುದಕ್ಕೆ ಅವಕಾಶ ಇರಲಿಲ್ಲ. ಅದೇರೀತಿ ಜೆಡಿಎಸ್‍ನ 17 ಸದಸ್ಯರಲ್ಲಿ 13ಮಂದಿಗೆ ಅವಕಾಶ ಇರಲಿಲ್ಲ. ಹೀಗಾಗಿ ಇದರಲ್ಲಿ ಸರ್ಕಾರ ಏನೂ ಮಾಡಲು ಬರುವುದಿಲ್ಲ. ಸರದಿಯಂತೆ ನಗರಾಭಿವೃದ್ಧಿ ಇಲಾಖೆ ಮೀಸಲು ಪಟ್ಟಿ ನಿಗದಿ ಮಾಡುತ್ತದೆ. ಸದ್ಯದಲ್ಲೇ ಮೀಸಲು ಪಟ್ಟಿ ಸಿದ್ಧವಾಗಿ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ರಾಮಲಿಂಗಾ ರೆಡ್ಡಿ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.