ಜಿಲ್ಲಾ ಸುದ್ದಿ

ಸರ್ಕಾರಿ ಯೋಜನೆ ಹಣ ಬಿಬಿಎಂಪಿಗೆ ಬಳಸಬೇಡಿ: ಟಿ.ಎಂ. ವಿಜಯಭಾಸ್ಕರ್

ರಸ್ತೆ ಮೂಲಸೌಕರ್ಯಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಯೋಜನೆಗಳ ಅನುದಾನವನ್ನು ಇತರೆ ಯೋಜನೆಗಳಿಗಾಗಿ ಬಳಸಬಾರದು ಎಂದು ಆಡಳಿತಾಧಿಕಾರಿ ಟಿ.ಎಂ.ವಿಜಯಭಾಸ್ಕರ್ ಅಧಿಕಾರಿಗಳಿಗೆ ಎಚ್ಚರಿಸಿದ್ದಾರೆ...

ಸರ್ಕಾರಿ ಯೋಜನೆ ಹಣ ಬಿಬಿಎಂಪಿಗೆ ಬಳಸಬೇಡಿ: ಟಿ.ಎಂ. ವಿಜಯಭಾಸ್ಕರ್
ಬಿಬಿಎಂಪಿ ಆಡಳಿತಾಧಿಕಾರಿ ಟಿ.ಎಂ.ವಿಜಯಭಾಸ್ಕರ್
Published On :

ಬೆಂಗಳೂರು: ರಸ್ತೆ ಮೂಲಸೌಕರ್ಯಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಯೋಜನೆಗಳ ಅನುದಾನವನ್ನು ಇತರೆ ಯೋಜನೆಗಳಿಗಾಗಿ ಬಳಸಬಾರದು ಎಂದು ಆಡಳಿತಾಧಿಕಾರಿ ಟಿ.ಎಂ.ವಿಜಯಭಾಸ್ಕರ್ ಅಧಿಕಾರಿಗಳಿಗೆ ಎಚ್ಚರಿಸಿದ್ದಾರೆ.

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸೋಮವಾರ ರಸ್ತೆ ಮೂಲಸೌಕರ್ಯ ವಿಭಾಗದ ಎಂಜಿನಿಯರ್‍ಗಳೊಂದಿಗೆ ಸಭೆ ನಡೆಸಿದ ಅವರು, ಬಿಬಿಎಂಪಿ ಯೋಜನೆ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ನಡುವೆ ಅಂತರ ಕಾಪಾಡುವಂತೆ ಸೂಚಿಸಿದ್ದಾರೆ. ರಾಜ್ಯ ಸರ್ಕಾರದ ರಸ್ತೆ ಕಾಮಗಾರಿ ಯೋಜನೆಗಳಿಗೆ ಪ್ರತ್ಯೇಕ ಬಜೆಟ್ ಇರುವುದರಿಂದ ಬಿಬಿಎಂಪಿ ಯೋಜನೆಗಳ ಈ ಹಣವನ್ನು ಬಳಸಬಾರದು. ಈಗ ಹೊಸದಾಗಿ ಬಿಬಿಎಂಪಿಯಲ್ಲಿ ನಡೆಯಲಿರುವ ಕಾಮಗಾರಿಗಳಿಗೆ ಟೆಂಡರ್ ಕರೆದು ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸಬೇಕು.

ಆರ್ಟಿರಿ ಯಲ್ ಹಾಗೂ ಸಬ್  ಆರ್ಟಿರಿಯಲ್ ರಸ್ತೆಗಳಲ್ಲಿನ ಗುಂಡಿಗಳನ್ನು ಮುಚ್ಚಲು ಸೂಚನೆ ನೀಡಿದ್ದು, ಶೀಘ್ರವಾಗಿ ಕಾಮಗಾರಿ ಮುಗಿಸಬೇಕು. ಕಾಮಗಾರಿ ಪ್ರಗತಿಯಲ್ಲಿರುವ ಸ್ಥಳಗಲ್ಲಿ ಯೋಜನೆಯ ಹೆಸರು, ಜಲಮಂಡಳಿ ಅಧಿಕಾರಿಗಳ ಜೊತೆ ಮಾತುಕತೆ ಕೆಲವು ಮುಖ್ಯರಸ್ತೆಗಳಲ್ಲಿ ಪೈಪ್‍ಲೈನ್ ಅಳವಡಿಸಲು ಜಲಮಂಡಳಿ ಅಧಿಕಾರಿಗಳು ರಸ್ತೆ ಅಗೆಯುತ್ತಿದ್ದಾರೆ.

ಕೆಲವೆಡೆ ರಸ್ತೆ ಅಗೆದು, ಮುಚ್ಚದೆ ಹಾಗೆಯೇ ಬಿಡುವುದರಿಂದ ವಾಹನ ದಟ್ಟಣೆ ಹೆಚ್ಚುತ್ತಿದೆ. ಪದೇ ಪದೇ ಗುಂಡಿ ತೋಡುವುದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಈ ಬಗ್ಗೆ ಜಲಮಂಡಳಿ ಅಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದು ಸಭೆಯಲ್ಲಿದ್ದ ಸಂಚಾರಿ ಪೊಲೀಸ್ ಮುಖ್ಯಸ್ಥರು ಮನವಿ ಮಾಡಿದರು.

ರಸ್ತೆ ಅಗೆಯುವಾಗ ಎಚ್ಚರವಹಿಸು ವಂತೆ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪೈಪ್‍ಲೈನ್ ಅಳವಡಿಸುವಂತೆ ಜಲ ಮಂಡಳಿ ಅಧಿಕಾರಿ ಗಳಿಗೆ ಸೂಚಿಸ ಲಾಗು ವುದು ಎಂದು ಆಡಳಿತಾಧಿಕಾರಿ ವಿಜಯಭಾಸ್ಕರ್ ಸಂಚಾರಿ ಪೊಲೀಸರಿಗೆ ತಿಳಿಸಿದರು.ಆಯುಕ್ತ ಜಿ.ಕುಮಾರ್ ನಾಯಕ್ ಸಭೆಯಲ್ಲಿ ಹಾಜರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.