ಪುತ್ರಿಗೆ ವಿಷವುಣಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡ ತಾಯಿ
ಖಾಸಗಿ ಬಸ್ ಮಾಲೀಕರೊಬ್ಬರ ಪತ್ನಿ, ಮಗಳಿಗೆ ವಿಷ ಹಾಕಿ, ತಾನೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಬ್ರಮಣ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ಸಂಜೆ ನಡೆದಿದೆ...

ಬೆಂಗಳೂರು: ಖಾಸಗಿ ಬಸ್ ಮಾಲೀಕರೊಬ್ಬರ ಪತ್ನಿ, ಮಗಳಿಗೆ ವಿಷ ಹಾಕಿ, ತಾನೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಬ್ರಮಣ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ಸಂಜೆ ನಡೆದಿದೆ.
ರಾಜಾಜಿನಗರ ಡಿ. ಬ್ಲಾಕ್ ನಿವಾಸಿ ಸೀಬರ್ಡ್ ಟ್ರಾವೆಲ್ಸ್ ಬಸ್ ಕಂಪನಿಯ ಮಾಲೀಕರಾದ ನಾಗರಾಜಯ್ಯ ಅವರ ಪತ್ನಿ ಅರುಣಾ (32) ಆತ್ಮಹತ್ಯೆ ಮಾಡಿಕೊಂಡವರು. ವಿಷ ಉಣಿಸಲ್ಪಟ್ಟಿದ್ದ ಮಗಳು ಶಿವಾನಿ(10) ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಭಾನುವಾರ ಸಂಜೆ ಮಗಳಿಗೆ ವಿಷ ಕುಡಿಸಿ ತಾನೂ ವಿಷ ಕುಡಿದಿದ್ದ ಅರುಣಾಳನ್ನು ತಕ್ಷಣವೇ ರಾಜಾಜಿನಗರದ ಅನನ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅರುಣಾ ಸೋಮವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಈ ಮಧ್ಯೆ, ಅವರ ಮಗಳನ್ನು ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು ಪ್ರಾಣಾಪಾಯದಿಂದ ಪಾರಾಗಿ ರುವುದಾಗಿ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಪೀಣ್ಯ ಸಮೀಪದ ಗಣಪತಿನಗರದ ನಿವಾಸಿಯಾದ ಅರುಣಾ 2011ರಲ್ಲಿ ನಾಗರಾಜಯ್ಯ ಅವರನ್ನು ವಿವಾಹ ವಾಗಿದ್ದರು. ದಂಪತಿ ರಾಜಾಜಿ ನಗರದ ಡಿ ಬ್ಲಾಕ್‍ನ 5ನೇ ಮುಖ್ಯರಸ್ತೆಯಲ್ಲಿ ನೆಲೆಸಿದ್ದರು ಎಂದು ತಿಳಿಸಿರುವ ಪೊಲೀಸರು, ಜೀವನದಲ್ಲಿ ಜಿಗುಪ್ಸೆಗೊಂಡಿದ್ದೇ ಆತ್ಮಹತ್ಯೆಗೆ ಕಾರಣ ಎಂದು ಹೇಳಿದ್ದಾರೆ.
ಅಳಿಯ ಮತ್ತು ಮಗಳ ನಡುವೆ ಒಳ್ಳೆಯ ಹೊಂದಾಣಿಕೆ ಇತ್ತು. ಆದರೆ, ಹಲವು ದಿನಗಳಿಂದ ಖಿನ್ನತೆಗೆ ಒಳಗಾಗಿದ್ದ ಮಗಳು, ಅದರಿಂದ ಹೊರಗೆ ಬರುವ ಪ್ರಯತ್ನದಲ್ಲಿದ್ದರು. ಈ ಹಂತದಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅರುಣಾ ಅವರ ತಂದೆ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ. ಸುಬ್ರಮಣ್ಯನಗರದಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


