ಜಿಲ್ಲಾ ಸುದ್ದಿ

ವಿದ್ಯಾರ್ಥಿಗೆ ಚಾಕು ಇರಿದ ದುಷ್ಕರ್ಮಿಗಳು

ಸ್ನೇಹಿತನ ಭೇಟಿ ಮಾಡಿ ಪಿಜಿಗೆ ಮರಳುತ್ತಿದ್ದ ಕಾಲೇಜು ವಿದ್ಯಾರ್ಥಿಗೆ ಚಾಕುವಿನಿಂದ ಇರಿದ ದುಷ್ಕರ್ಮಿಗಳು ಹಣ ದೋಚಿರುವ ಘಟನೆ ಪರಪ್ಪನ ಅಗ್ರಹಾರ ಸಮೀಪದ ಎಸಿಎಸ್ ಬಡಾವಣೆಯಲ್ಲಿ ಬುಧವಾರ ರಾತ್ರಿ ನಡೆದಿದೆ...

ವಿದ್ಯಾರ್ಥಿಗೆ ಚಾಕು ಇರಿದ ದುಷ್ಕರ್ಮಿಗಳು
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಸ್ನೇಹಿತನ ಭೇಟಿ ಮಾಡಿ ಪಿಜಿಗೆ ಮರಳುತ್ತಿದ್ದ ಕಾಲೇಜು ವಿದ್ಯಾರ್ಥಿಗೆ ಚಾಕುವಿನಿಂದ ಇರಿದ ದುಷ್ಕರ್ಮಿಗಳು ಹಣ ದೋಚಿರುವ ಘಟನೆ ಪರಪ್ಪನ ಅಗ್ರಹಾರ ಸಮೀಪದ ಎಸಿಎಸ್ ಬಡಾವಣೆಯಲ್ಲಿ ಬುಧವಾರ ರಾತ್ರಿ ನಡೆದಿದೆ.

ಛತ್ತೀಸಗಢ ಮೂಲದ ಅಲೋಕ್‍ಸಿಂಗ್ ಇರಿತಕ್ಕೊಳಗಾದ ವಿದ್ಯಾರ್ಥಿ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ. ಖಾಸಗಿ ಕಾಲೇಜಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ಅಲೋಕ್, ಸಿಂಗಸಂದ್ರದಲ್ಲಿ ಪೇಯಿಂಗ್ ಗೆಸ್ಟ್ ಆಗಿದ್ದಾರೆ.

ರಾತ್ರಿ 11 ಗಂಟೆಗೆ ಸ್ನೇಹಿತನ ಭೇಟಿ ಮಾಡಲೆಂದು ಎಸಿಎಸ್ ಬಡಾವಣೆಗೆ ಬಂದಿದ್ದಾರೆ.  ಬೈಕ್‍ನಲ್ಲಿ ಬಂದು ಅಡ್ಡಗಟ್ಟಿದ ದುಷ್ಕರ್ಮಿಗಳು, ಚಾಕುವಿನಿಂದ ಬೆದರಿಸಿ ಹಣ, ಮೊಬೈಲ್ ನೀಡುವಂತೆ ಕೇಳಿದ್ದಾರೆ. ಇದಕ್ಕೆ ವಿರೋಧಿಸಿದಾಗ ದುಷ್ಕರ್ಮಿಗಳು ಅಲೋಕ್ ಬೆನ್ನಿಗೆ ಚಾಕುವಿನಿಂದ ಇರಿದು ಜೇಬಿನಲ್ಲಿದ್ದ ರು.350 ಕಿತ್ತುಕೊಂಡು ಪರಾರಿಯಾಗಿದ್ದಾರೆ. ಕಿರುಚಾಟ ಕೇಳಿದ ಆಟೋ ಚಾಲಕರು ಸ್ಥಳಕ್ಕೆ ಬರುತ್ತಿದ್ದನ್ನು ಗಮನಿಸಿದ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಪರಪ್ಪನ ಅಗ್ರಾಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.