ಮುಂಬೈ ಮೂಲದ ಕಿರುತೆರೆ ನಟಿ ಮೇಲೆ ಅತ್ಯಾಚಾರ
ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಮುಂಬೈ ಮೂಲದ ಕಿರುತೆರೆ ನಟಿ ಮೇಲೆ ಅತ್ಯಾಚಾರವಾದ ಕುರಿತು ಮಹಿಳಾ ಆಯೋಗದಲ್ಲಿ ದೂರು ದಾಖಲಾಗಿದೆ.

ಬೆಂಗಳೂರು: ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಮುಂಬೈ ಮೂಲದ ಕಿರುತೆರೆ ನಟಿ ಮೇಲೆ ಅತ್ಯಾಚಾರವಾದ ಕುರಿತು ಮಹಿಳಾ ಆಯೋಗದಲ್ಲಿ ದೂರು ದಾಖಲಾಗಿದೆ.
ಕನ್ನಡ ಚಿತ್ರದಲ್ಲಿ ಅವಕಾಶ ಅರಸಿ ಬಂದಿದ್ದ ಮುಂಬೈ ಮೂಲದ ಕಿರುತೆರೆ ನಟಿ ಮೇಲೆ ನಿರ್ಮಾಪಕರು ಎಂದು ಹೇಳಿಕೊಂಡು ಇಬ್ಬರು ಅಪರಚಿತರು ಅತ್ಯಾಚಾರ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಕಳೆದ ಮಾರ್ಚ್ 25ರಂದು ಮುಂಬೈನಿಂದ ಬೆಂಗಳೂರಿಗೆ ಆಗಮಿಸಿದ್ದ ಕಿರುತೆರೆ ನಟಿಯನ್ನು ಕೋರಮಂಗಲದ ಖಾಸಗಿ ಹೊಟೆಲ್ ವೊಂದಕ್ಕೆ ಕರೆಸಿಕೊಂಡಿದ್ದ ದುಷ್ಕರ್ಮಿಗಳು ತಂಪು ಪಾನೀಯದಲ್ಲಿ ಮತ್ತು ಬರಿಸುವ ಔಷಧ ನೀಡಿ ಸಾಮೂಹಿಕವಾಗಿ ಅತ್ಯಾಚಾರ ಮಾಡಿದ್ದಾರೆ ಎಂದು ನಟಿ ಆರೋಪಿಸಿದ್ದಾಳೆ.
ಅಲ್ಲದೆ ದುಷ್ಕರ್ಮಿಗಳು ಈ ವಿಚಾರವನ್ನು ಪೊಲೀಸರಿಗೆ ತಿಳಿಸಿದರೆ ನಿನ್ನನ್ನು ಕೊಲ್ಲುವುದಾಗಿ ಜೀವ ಬೆದರಿಕೆ ಹಾಕಿದ್ದರು. ಹೀಗಾಗಿ ತಡವಾಗಿ ದೂರು ನೀಡುತ್ತಿದ್ದೇನೆ. ತನಗೆ ನ್ಯಾಯಾ ಕೊಡಿಸುವಂತೆ ನಟಿ ಮಹಿಳಾ ಆಯೋಗದ ಬಳಿ ಮನವಿ ಮಾಡಿಕೊಂಡಿದ್ದಾಳೆ.
ಪ್ರಕರಣ ಬಯಲಿಗೆ ಬರುತ್ತಿದ್ದಂತೆಯೇ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಮಂಜುಳಾ ಮಾನಸ ಅವರು, ಆಗ್ನೇಯ ವಿಭಾಗ ಡಿಸಿಪಿಗೆ ಮಾಹಿತಿ ನೀಡಿದ್ದಾರೆ. ಪ್ರಸ್ತುತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


