ಜಿಲ್ಲಾ ಸುದ್ದಿ

ಕೊಲೆ ಶಂಕೆ, ಕಾಂಗ್ರೆಸ್ ನಾಯಕನ ಪುತ್ರ ಸೇರಿ ಇಬ್ಬರ ಬಂಧನ

ಶಂಕಿತ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪೊಲೀಸರು ಇಲ್ಲಿನ ಕಾಂಗ್ರೆಸ್ ಮುಖಂಡರೊಬ್ಬರ ಪುತ್ರ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ...

ಕೊಲೆ ಶಂಕೆ, ಕಾಂಗ್ರೆಸ್ ನಾಯಕನ ಪುತ್ರ ಸೇರಿ ಇಬ್ಬರ ಬಂಧನ
ಸಾಂದರ್ಭಿಕ ಚಿತ್ರ
Published On :

ಕೊಪ್ಪಳ: ಶಂಕಿತ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪೊಲೀಸರು ಇಲ್ಲಿನ ಕಾಂಗ್ರೆಸ್ ಮುಖಂಡರೊಬ್ಬರ ಪುತ್ರ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ.

ಕಾಂಗ್ರೆಸ್ ಮುಖಂಡ ಹನುಮೇಶ್ ನಾಯಕ್ ಅವರ ಪುತ್ರ ಮಹಂತೇಶ್ ನಾಯಕ್ ಮತ್ತು ಆತನ ಸ್ನೇಹಿತರಾದ ಮನೋಜ್ ಮತ್ತು ದುರ್ಗಪ್ಪ ಅವರನ್ನು ಪೊಲೀಸರು ಬಂಧಿಸಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಕಳೆದ ಜನವರಿ 11ರಂದು ಕೊಪ್ಪಳ ಹೊರವಲಯದ ರೈಲ್ವೆ ಹಳಿ ಮೇಲೆ ಪಿಯುಸಿ ವಿದ್ಯಾರ್ಥಿಯ ಮೃತದೇಹ ಪತ್ತೆಯಾಗಿತ್ತು. ಕೊಪ್ಪಳದ ಕನಕಪುರ ತಾಂಡಾ ಹುಲಿಹೈದರ್ ಗ್ರಾಮದ ಯಲ್ಲಲಿಂಗ ಮೃತ ವ್ಯಕ್ತಿಯಾಗಿದ್ದು, ಇದೊಂದು ಕೊಲೆ ಎಂದು ಆತನ ಕುಟುಂಬದವರು ಜನವರಿ 31ರಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ರಾಜಾ ಅವರಿಗೆ ದೂರು ನೀಡಿದ್ದರು.

ಹುಲಿಹೈದರ್ ಗ್ರಾಮ ಪಂಚಾಯತಿಯಲ್ಲಿ ಭಾರೀ ಅಕ್ರಮ ನಡೆದಿರುವ ಸಂಗತಿಯನ್ನು ಹೊರಹಾಕಿದ್ದರಿಂದ ಅವನನ್ನು ಕೊಲೆ ಮಾಡಲಾಗಿದೆ ಎಂದು ಕುಟುಂಬದವರು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಘಟನೆ ಬಗ್ಗೆ ತನಿಖೆ ನಡೆಸಲು ಪೊಲೀಸರ ವಿಶೇಷ ತಂಡವನ್ನು ರಚಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.