ಬೆಂಗಳೂರಿನಲ್ಲಿ ಧಾರಾಕಾರ ಮಳೆ, ಕುಸಿದು ಬಿದ್ದ ಜೆಡಿಎಸ್ ಪೆಂಡಾಲ್
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಶನಿವಾರ ಮಧ್ಯಾಹ್ನದಿಂದಲೇ ಧಾರಾಕಾರ ಮಳೆ ಸುರಿಯುತ್ತಿದ್ದು, ಮಳೆಯಿಂದಾಗ ಮೆಜೆಸ್ಟಿಕ್ ಸೇರಿದಂತೆ...

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಶನಿವಾರ ಮಧ್ಯಾಹ್ನದಿಂದಲೇ ಧಾರಾಕಾರ ಮಳೆ ಸುರಿಯುತ್ತಿದ್ದು, ಮಳೆಯಿಂದಾಗ ಮೆಜೆಸ್ಟಿಕ್ ಸೇರಿದಂತೆ ಹಲವು ಕಡೆ ವಾಹನ ಸಂಚಾರ ಅಸ್ತವ್ಯಸ್ತವಾಗಿದೆ.
ಮೆಜೆಸ್ಟಿಕ್, ಗಾಂಧಿನಗರದಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಸಂಚಾರ ದಟ್ಟಣೆ ಉಂಟಾಗಿದೆ. ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ ವಾಹನ ಸವಾರರು ಮನೆ ತಲುಪಲು ಪರದಾಡುತ್ತಿದ್ದಾರೆ.
ಶಾಂತಿನಗರ, ಶೇಷಾದ್ರಿಪುರ, ಬಾಪೂಜಿನಗರ, ಈಜಿಪುರ, ಮಾಗಡಿರಸ್ತೆ, ಇಂದಿರಾನಗರ, ಚಾಮರಾಜಪೇಟೆ, ರಾಜಾಜಿನಗರ, ಕೆ.ಆರ್,ವೃತ್ತ, ಬಸವೇಶ್ವರ ನಗರ, ಸೇರಿದಂತೆ ನಗರದ ಬಹುತೇಕ ಪ್ರದೇಶಗಳಲ್ಲಿ ಭಾರಿ ಮಳೆ ಸುರಿಯುತ್ತಿದೆ.
ರಸ್ತೆಗಳು ಹಳ್ಳಗಳಂತಾದರೆ, ತಗ್ಗು ಪ್ರದೇಶಗಳು ಕೆರೆಗಳಾಗಿದ್ದು, ರಸ್ತೆ ಯಾವುದು, ಹೊಂಡ ಯಾವುದು ಎಂದು ಗುರುತಿಸಲು ಸಾಧ್ಯವಾಗದೆ ವಾಹನ ಸವಾರರು ಪರದಾಡುತ್ತಿದ್ದಾರೆ.
ಕುಸಿದು ಬಿದ್ದ ಜೆಡಿಎಸ್ ಪೆಂಡಾಲ್:
ನಗರದ ಫ್ರೀಡಂ ಪಾರ್ಕ್ ನಲ್ಲಿ ನಾಳೆ ನಡೆಯಬೇಕಿರುವ ಜೆಡಿಎಸ್ ಅಹವಾಲು ಸ್ವೀಕಾರ ಸಮಾರಂಭಕ್ಕಾಗಿ ಬೃಹತ್ ಪೆಂಡಾಲ್ ಹಾಕಲಾಗಿತ್ತು. ಧಾರಾಕಾರ ಸುರಿದ ಪರಿಣಾಮ ಪೆಂಡಾಲ್ ಕುಸಿದುಬಿದ್ದ ಘಟನೆ ನಡೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


