ಜಿಲ್ಲಾ ಸುದ್ದಿ

ನಗರದಲ್ಲಿ ಮುಂದುವರೆದ ಸರಗಳ್ಳತನ

ನಗರದಲ್ಲಿ ಸರಗಳ್ಳರ ಹಾವಳಿ ಮುಂದುವರೆದಿದ್ದು ಶನಿವಾರ ಬೆಳಗ್ಗೆ ಮಹಾಲಕ್ಷ್ಮೀ ಬಡಾವಣೆ ಹಾಗೂ ಯಲಹಂಕದಲ್ಲಿ ಸರಗಳ್ಳರು...

ನಗರದಲ್ಲಿ ಮುಂದುವರೆದ ಸರಗಳ್ಳತನ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ನಗರದಲ್ಲಿ ಸರಗಳ್ಳರ ಹಾವಳಿ ಮುಂದುವರೆದಿದ್ದು ಶನಿವಾರ ಬೆಳಗ್ಗೆ ಮಹಾಲಕ್ಷ್ಮೀ ಬಡಾವಣೆ ಹಾಗೂ ಯಲಹಂಕದಲ್ಲಿ ಸರಗಳ್ಳರು ಕೃತ್ಯ ಎಸಗಿದ್ದಾರೆ.

ಮಹಾಲಕ್ಷ್ಮೀ ಬಡಾವಣೆ ಸಮೀಪದ ಜೆಸಿ ನಗರಜದಲ್ಲಿ ಜಾನಕಿ(60) ಎಂಬುವರ ಸರವನ್ನು ದುಷ್ಕರ್ಮಿಗಳು ಕಸಿದು ಪರಾರಿಯಾಗಿದ್ದಾರೆ. ಬೆಳಗ್ಗೆ 5 ಗಂಟೆ ಸುಮಾರಿಗೆ ಜಾನಕಿ ಹೊರಗೆ ಬಂದಾಗ ಬೈಕ್‍ನಲ್ಲಿ ಹಿಂದಿನಿಂದ ಬಂದು 30 ಗ್ರಾಂ ಚಿನ್ನದ ಸರ ಕಸಿದು ಪರಾರಿಯಾಗಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ಯಲಹಂಕ ಸಮೀಪದ ಹುಣಸಮಾರನಹಳ್ಳಿಯಲ್ಲಿ ರಮಾ(35) ಎಂಬುವರ ಸರ ಅಪಹರಿಸಲಾಗಿದೆ. ಬೆಳಗ್ಗೆ 9.45ರ ಸುಮಾರಿಗೆ ನಾಯಿಯನ್ನು ಕರೆದುಕೊಂಡು ಸಮೀಪದ ನೀಲಗಿರಿ ಪ್ರದೇಶದ ಕಡೆ ವಾಯುವಿಹಾರಕ್ಕೆ ತೆರಳಿದ್ದರು. ಈ ವೇಳೆ ಹಿಂದಿನಿಂದ ಬೈಕ್‍ನಲ್ಲಿ ಬಂದ ದುಷ್ಕರ್ಮಿಗಳು ರಮಾ ಅವರ ಮುಖವನ್ನು ಬಟ್ಟೆಯಿಂದ ಮುಚ್ಚಿ ಸರ ಕಿತ್ತುಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ ಪ್ರತಿರೋಧ ವ್ಯಕ್ತಪಡಿಸಿದ ರಮಾ ಕಿರುಚಾಡುತ್ತಾ ಸರವನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದಾರೆ. ಆದರೂ, ದುಷ್ಕರ್ಮಿಗಳು ಅರ್ಧ ಸರವನ್ನು(30 ಗ್ರಾಂ) ಕಿತ್ತುಕೊಂಡು ಪರಾರಿಯಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.