ವಿವಿಗಳು ಮೌಲ್ಯಾಧಾರಿತ ಶಿಕ್ಷಣ ನೀಡುತ್ತಿಲ್ಲ: ನ್ಯಾ.ಮಳೀಮಠ
ವಿಶ್ವವಿದ್ಯಾಲಯಗಳು ಮೌಲ್ಯಾಧಾರಿತ ಶಿಕ್ಷಣ ನೀಡುವುದು ತಮ್ಮ ಜವಾಬ್ದಾರಿ ಎಂದು ತಿಳಿದಿಲ್ಲ. ಮೌಲ್ಯವಿಲ್ಲದ ಶಿಕ್ಷಣವು ಶಿಕ್ಷಣವೇ ಅಲ್ಲ. ವ್ಯಕ್ತಿಯಲ್ಲಿ ಸಚ್ಚಾರಿತ್ರ್ಯ ಬೆಳೆಸುವುದು ಶಿಕ್ಷಣದ ಪರಮ...

ಬೆಂಗಳೂರು: ವಿಶ್ವವಿದ್ಯಾಲಯಗಳು ಮೌಲ್ಯಾಧಾರಿತ ಶಿಕ್ಷಣ ನೀಡುವುದು ತಮ್ಮ ಜವಾಬ್ದಾರಿ ಎಂದು ತಿಳಿದಿಲ್ಲ. ಮೌಲ್ಯವಿಲ್ಲದ ಶಿಕ್ಷಣವು ಶಿಕ್ಷಣವೇ ಅಲ್ಲ. ವ್ಯಕ್ತಿಯಲ್ಲಿ ಸಚ್ಚಾರಿತ್ರ್ಯ ಬೆಳೆಸುವುದು ಶಿಕ್ಷಣದ ಪರಮ ಜವಾಬ್ದಾರಿಯಾಗಿದೆ ಎಂದು ಕೇರಳ ಉಚ್ಛ ನ್ಯಾಯಾಲಯದ ನಿವೃತ್ತ ಮುಖ್ಯ ನ್ಯಾಯಮೂರ್ತಿ ವಿ.ಎಸ್. ಮಳೀಮಠ ಹೇಳಿದರು.
ನಗರದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಬುಧವಾರ ನಡೆದ ರಾಣಿ ಚನ್ನಮ್ಮ ವಿವಿಯ ಮೂರನೇ ಘಟಿಕೋತ್ಸವದಲ್ಲಿ ಮಾತನಾಡಿದ ಅವರು, ಈಗಿನ ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಯಾವುದೇ ರೀತಿಯ ಕ್ರಮ ತೆಗೆದುಕೊಳ್ಳುತ್ತಿಲ್ಲ. ಬದಲಾಗಿ ಶಿಕ್ಷಕರೇ ವಿದ್ಯಾರ್ಥಿಗಳನ್ನು ಪೀಡಿಸುವ ಘಟನೆಗಳು ವರದಿಯಾಗುತ್ತಿದೆ. ಶಿಕ್ಷಕರು ಸಚ್ಚಾರಿತ್ರ್ಯ ಮತ್ತು ನೈತಿಕ ವರ್ತನೆಯನ್ನು ಉಳಿಸಿಕೊಂಡಿದ್ದಾರೆಯೇ ಎಂದು ಖಚಿಪಡಿಸಿಕೊಳ್ಳಲಿಕ್ಕೆ ವಿಶ್ವವಿದ್ಯಾಲಯಗಳು ಯಾವುದೇ ಕ್ರಮಕೈಗೊಳ್ಳುತ್ತಿಲ್ಲ ಎಂದು ವಿಷಾದಿಸಿದರು.
ಸರ್ಕಾರ ಮತ್ತು ವಿಶ್ವವಿದ್ಯಾಲಯಗಳು ಹೆಚ್ಚು ಗಂಭೀರವಾಗಿ ಚಿಂತಿಸಬೇಕಾಗಿದೆ. ವಿವಿಗಳು ವಿದ್ಯಾರ್ಥಿಗಳಿಗೆ ಸೂಕ್ತ ಶಿಕ್ಷಣ ಮತ್ತು ತರಬೇತಿ ನೀಡಬೇಕು. ಕಾರಣವಿಲ್ಲದ ಕೋಮು ದೊಂಬಿ ಹಾಗೂ ಹೋರಾಟಗಳ ಮೂಲಕ ದೈನಂದಿನ ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ. ಜವಾಬ್ದಾರಿಯುತ ವ್ಯಕ್ತಿಗಳೇ ಬಲತ್ಕಾರ ಮತ್ತು ಲೈಂಗಿಕ ದೌರ್ಜನ್ಯ ಎಸೆಗುತ್ತಿದಾರೆ. ಶಿಕ್ಷಕರು ವಿದ್ಯಾರ್ಥಿಗಳ ಮೇಲೆ, ವೈದ್ಯರು ರೋಗಿಗಳ ಮೇಲೆ, ಧರ್ಮಾಧಿಕಾರಿಗಳು ಭಕ್ತರ ಮೇಲೆ, ಮನೆಯ ಹಿರಿಯರು ಕಿರಿಯರ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ. ಇವು ಕಳವಳಕಾರಿ
ವಿಷಯ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ರಾಜ್ಯಪಾಲ ವಾಜುಭಾಯಿ ವಾಲಾ ಘಟಿಕೋತ್ಸವಕ್ಕೆ ಚಾಲನೆ ನೀಡಿದರು. ಸಮಕುಲಾಧಿಪತಿ ಉನ್ನತ ಶಿಕ್ಷಣ ಸಚಿವ ಆರ್.ವಿ. ದೇಶಪಾಂಡೆ, ಪ್ರಭಾರಿ ಕುಲಪತಿ ಡಾ.ದಶರಥ ಅಲಬಾಳ ಹಾಗೂ ವಿವಿಧ ಸಿಂಡಿಕೇಟ್ ಸದಸ್ಯರು, ವಿವಿಧ ವಿಭಾಗಗಳ ಮುಖ್ಯಸ್ಥರು ಇದ್ದರು. ಇದೇ ಸಂದರ್ಭದಲ್ಲಿ ರ್ಯಾಂಕ್ ಪಡೆದ 28 ಜನ ವಿದ್ಯಾರ್ಥಿಗಳಿಗೆ ಚಿನ್ನದ ಪದಕ ನೀಡಿ ಗೌರವಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


