ಜಿಲ್ಲಾ ಸುದ್ದಿ

ಕಾರು ಡಿಕ್ಕಿ: ಬೈಕ್ ಸವಾರ ಸಾವು

ಕೆಐಎಎಲ್ ರಸ್ತೆ ಚಿಕ್ಕಜಾಲದ ಮೀನುಕುಂಟೆ ಹೊಸೂರು ಗೇಟ್ ಬಳಿ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ...

ಕಾರು ಡಿಕ್ಕಿ: ಬೈಕ್ ಸವಾರ ಸಾವು
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಕೆಐಎಎಲ್ ರಸ್ತೆ ಚಿಕ್ಕಜಾಲದ ಮೀನುಕುಂಟೆ ಹೊಸೂರು ಗೇಟ್ ಬಳಿ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ರಾಮು (26) ಮೃತರು. ಘಟನೆಯಲ್ಲಿ ಗಾಯಗೊಂಡಿರುವ ಮೃತನ ಸ್ನೇಹಿತ ಅಜಯ್ ಎಬುವವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬುಧವಾರ ಸಂಜೆ ಕೆಲಸ ಮುಗಿಸಿಕೊಂಡು ತನ್ನ ಗೆಳೆಯನ ಜತೆ ರಾಮು ಮನೆಗೆ ಮರಳುವಾಗ ಈ ಅವಘಡ ಸಂಭವಿಸಿದೆ. ಅಪಘಾತದ ಬಳಿಕ ಚಾಲಕ ಕಾರು ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ. ಕನಕಪುರ ಮೂಲದ ರಾಮು ಮೀನುಕುಂಟೆ ಹೊಸೂರು ಹತ್ತಿರದ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ರಾತ್ರಿ 7.15ರಲ್ಲಿ ಕೆಲಸ ಮುಗಿಸಿ ಸ್ನೇಹಿತ ಅಜಯ್ ಜತೆ ಮನೆಗೆ ಮರಳುತ್ತಿದ್ದರು. ಈ ವೇಳೆ ಮೀನಕುಂಟೆ ಹೊಸೂರು ಗೇಟ್ ಬಳಿ ಅಜಯ್ ಬೈಕ್ ಅನ್ನು ಯು ಟ್ರನ್ ತೆಗೆದುಕೊಳ್ಳುವಾಗ ನಗರದ ಕಡೆಯಿಂದ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಈ ಡಿಕ್ಕಿಯ ತೀರ್ವತೆಗೆ ಬೈಕನ್ನು ಕಾರು, ಸುಮಾರು 20 ಅಡಿ ದೂರ ಎಳೆದೊಯ್ದಿದೆ.

ಗಾಯಾಳುಗಳನ್ನು ಸ್ಥಳೀಯರು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಿಸದೆ ರಾಮು ಕೊನೆಯುಸಿರೆಳೆದಿದ್ದು, ಅಜಯ್ ಪ್ರಾಣಪಾಯದಿಂದ ಪಾರಾಗಿದ್ದಾರೆ. ಚಿಕ್ಕಜಾಲ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.